ಐತಿಹಾಸಿಕ ಜಂಬೂ ಸವಾರಿಗೆ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ: ಗಣ್ಯರು ಸಾಥ್. ಮೈಸೂರು,ಅಕ್ಟೋಬರ್,5,2022(..):ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ದಸರಾ ಜಂಬೂ ಸವಾರಿ ಮೆರವಣಿಗೆಗೆ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು. ಅರಮನೆ ಒಳಾಂಗಣದಲ್ಲಿ ಕ್ಯಾಪ್ಟನ್ ಅಭಿಮನ್ಯು ಹೊತ್ತಿರುವ 750 ಕೆಜಿ ಚಿನ್ನದ ಅಂಬಾರಿಯಲ್ಲಿ ವೀರಾಜಮಾನರಾಗಿರುವ ತಾಯಿ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂ ಸವಾರಿಗೆ ಅಧಿಕೃತ ಚಾಲನೆ ನೀಡಿದರು. ಈ ವೇಳೆ ರಾಜ ವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಮೈಸೂರು ಮಹಾನಗರ ಪಾಲಿಕೆ ಮೇಯರ್ ಶಿವಕುಮಾರ್, ಸಚಿವರಾದ ಎಸ್.ಟಿ ಸೋಮಶೇಖರ್, ಸುನೀಲ್ ಕುಮಾರ್ ಮೈಸೂರು ಜಿಲ್ಲಾಧಿಕಾರಿ ಬಗಾದಿ ಗೌತಮ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. : - - .