ಬೈಕ್ ಗಳ ಮೇಲೆ ಹರಿದ ಕೆಎಸ್ ಆರ್ ಟಿಸಿ ಬಸ್ : ಮೂವರು ದುರ್ಮರಣ. ಚಿತ್ರದುರ್ಗ,ಅಕ್ಟೋಬರ್,3,2022(..):ಬೈಕ್ ಗಳ ಮೇಲೆ ಕೆಎಸ್ ಆರ್ ಟಿಸಿ ಬಸ್ ಹರಿದು ಮೂವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆಯಲ್ಲಿ ನಡೆದಿದೆ. ಹೊಳಲ್ಕೆರೆಯ ಕುಕ್ಕವಾಡೇಶ್ವರ ದೇಗುಲದ ಬಳಿ ಈ ಘಟನೆ ನಡೆದಿದೆ. ಹೊಳಲ್ಕೆರೆ ತಾಲ್ಲೂಕಿನ ರಂಗಾಪುರ ಗ್ರಾಮದ ಚಂದು(32), ಮಾಳೇನಹಳ್ಳಿ ಮನು, ಸತೀಶ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಎರಡು ಬೈಕ್ ಗಳಲ್ಲಿ ಬರುತ್ತಿದ್ದವರ ಮೇಲೆ ಕೆ.ಎಸ್ ಆರ್ ಟಿಸಿ ಬಸ್ ಹರಿದು ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಹೊಳಲ್ಕೆರೆ ಸಿಪಿಐ ರವೀಶ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು ಈ ಕುರಿತು ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : - –- –-