‘ಬಿಜೆಪಿ ಗೆದ್ದಿರುವ ಪ್ರತಿಯೊಂದು ಸ್ಥಾನದ ಹಿಂದೆ ಪರೇಶ್ ಮೇಸ್ತನಂಥ ಅಮಾಯಕ ಯುವಕರ ರಕ್ತ ಇದೆ- ಮಾಜಿ ಸಿಎಂ ಸಿದ್ಧರಾಮಯ್ಯ ಕಿಡಿ. ಬೆಂಗಳೂರು,ಅಕ್ಟೋಬರ್,4,2022(..):‘ಬಿಜೆಪಿ ಗೆದ್ದಿರುವ ಪ್ರತಿಯೊಂದು ಸ್ಥಾನದ ಹಿಂದೆ ಪರೇಶ್ ಮೇಸ್ತನಂಥ ಅಮಾಯಕ ಯುವಕರ ರಕ್ತ ಇದೆ’ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿದ್ಧರಾಮಯ್ಯ, ‘ಬಿಜೆಪಿ ನಾಯಕರೇ, ನೀವು ಅನುಭವಿಸುತ್ತಿರುವ ಅಧಿಕಾರದ ಕುರ್ಚಿಗೆ ಮೇಸ್ತಾನಂತಹ ಯುವಕರ ರಕ್ತದ ಕಲೆ ಅಂಟಿಕೊಂಡಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ಹೊನ್ನಾವರದ ಪರೇಶ್ ಮೇಸ್ತನದ್ದು ಹತ್ಯೆ ಅಲ್ಲ, ಆಕಸ್ಮಿಕ‌ ಸಾವು ಎಂಬ ಸಿಬಿಐನ ವಿಚಾರಣಾ ವರದಿ ರಾಜ್ಯ ಬಿಜೆಪಿ ಮುಖಕ್ಕೆ ಬಡಿದ ತಪರಾಕಿ. ಬಿಜೆಪಿಗೆ ಮಾನ-ಮರ್ಯಾದೆ ಇದ್ದರೆ ನಮ್ಮ ಮೇಲೆ ಮಾಡಿದ್ದ ಸುಳ್ಳು ಆರೋಪಕ್ಕಾಗಿ ಕ್ಷಮೆ ಕೋರಬೇಕು’ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. : – – - – - -