ಪರೇಶ್ ಮೆಸ್ತಾ ಹತ್ಯೆ ಪ್ರಕರಣದ ಬಗ್ಗೆ ಮರು ತನಿಖೆಯಾಗಬೇಕು- ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ. ಶಿವಮೊಗ್ಗ, ಅಕ್ಟೋಬರ್,4,2022(..):ಪರೇಶ್ ಮೆಸ್ತಾ ಹತ್ಯೆ ಪ್ರಕರಣದ ಬಗ್ಗೆ ಮರು ತನಿಖೆಯಾಗಬೇಕು ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಆಗ್ರಹಿಸಿದ್ದಾರೆ. ಈ ಕುರಿತು ಶಿವಮೊಗ್ಗದಲ್ಲಿ ಮಾತನಾಡಿದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ, ಪ್ರಕರಣದ ಬಗ್ಗೆ ಮರು ತನಿಖೆಯಾಗಬೇಕು ಸರ್ಕಾರ ಈ ನಿಟ್ಟಿನಲ್ಲಿ ಗಮನ ಹರಿಸಬೇಕು. ನಾನೂ ಕೂಡ ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡುತ್ತೇನೆ ಎಂದರು. ಪ್ರಕರಣದ ಬಗ್ಗೆ ಸರಿಯಾದ ತನಿಖೆಯಾಗಲಿ ಎಂದು ವಾದ ಹುಟ್ಟುಕೊಂಡಿದೆ. ಕುಟುಂಬಸ್ಥರು ಹಿಂದೂ ಯುವಕರು ಮರು ತನಿಖೆಗೆ ಆಗ್ರಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮರು ತನಿಖೆಯಾಗಬೇಕು. ಅದರ ನಂತರ ಯಾವುದೇ ವರದಿ ಬಂದರೂ ಒಪ್ಪಿಕೊಳ್ಳಬೇಕು ಎಂದು ಕೆ.ಎಸ್ ಈಶ್ವರಪ್ಪ ತಿಳಿಸಿದರು. : ’ - - --- - .