ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ. ಮೈಸೂರು,ಅಕ್ಟೋಬರ್,3,2022(..):ರಾಜ್ಯದಲ್ಲಿ ಭಾರತ್ ಜೋಡೋ ಯಾತ್ರೆ ನಡೆಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದರು. ಚಾಮುಂಡಿ ಬೆಟಕ್ಕೆ ರಾಹುಲ್ ಗಾಂಧಿ ಭೇಟಿ ನೀಡಿದ್ದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಾಜಿ ಸಿಎಂ ಸಿದ್ಧರಾಮಯ್ಯ ಸಾಥ್ ನೀಡಿದರು. ರಾಹುಲ್ ಗಾಂಧಿ ಭೇಟಿ ಹಿನ್ನೆಲೆ ಒಂದು ಗಂಟೆಗಳ ಕಾಲ ತಾಯಿ ಚಾಮುಂಡೇಶ್ವರಿ ದರ್ಶನಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿತ್ತು. ಇನ್ನು ಇಂದು ಮೈಸೂರಿಗೆ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾಗಾಂಧಿ ಭೇಟಿ ನೀಡುತ್ತಿದ್ದಾರೆ. ಸೋನಿಯಾ ಗಾಂಧಿ ಅವರನ್ನ ಸ್ವಾಗತಿಸಲು ಕೈ ಮುಖಂಡರು ತೆರಳಿದ್ದಾರೆ. : - - - - – .