ಕ್ರಿಕೆಟ್: ನಾಳೆ ಭಾರತ-ದಕ್ಷಿಣ ಆಫ್ರಿಕಾ 2ನೇ ಟಿ-20 ಪಂದ್ಯ ಬೆಂಗಳೂರು, ಅಕ್ಟೋಬರ್ 01, 2022 (..): ಭಾರತ – ಸೌತ್ ಆಫ್ರಿಕಾ ನಡುವಣ 2ನೇ ಟಿ20 ಪಂದ್ಯವು ನಾಳೆ (ಅಕ್ಟೋಬರ್ 2) ಗೌಹಾಟಿಯಲ್ಲಿ ನಡೆಯಲಿದೆ. 3 ಪಂದ್ಯಗಳ ಈ ಸರಣಿಯ ಮೊದಲ ಪಂದ್ಯದಲ್ಲಿ 8 ವಿಕೆಟ್​ಗಳಿಂದ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿ ವಿಶ‍್ವಾಸದಲ್ಲಿದೆ. ಭಾನುವಾರದ ಪಂದ್ಯದಲ್ಲಿ ಆರಂಭಿಕರಾಗಿ ಕೆಎಲ್ ರಾಹುಲ್ ಹಾಗೂ ರೋಹಿತ್ ಶರ್ಮಾ ಕಾಣಿಸಿಕೊಳ್ಳಲಿದ್ದಾರೆ. 3ನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ, ನಾಲ್ಕನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ ಆಡಲಿದ್ದಾರೆ. ಈ ಪಂದ್ಯವು ಸೌತ್ ಆಫ್ರಿಕಾ ಪಾಲಿಗೆ ನಿರ್ಣಾಯಕವಾಗಿದೆ. ಈ ಪಂದ್ಯದಲ್ಲಿ ಭಾರತ ತಂಡವು ಜಯ ಸಾಧಿಸಿದರೆ ಸರಣಿ ಟೀಮ್ ಇಂಡಿಯಾ ಪಾಲಾಗಲಿದೆ. ಸಂಭಾವ್ಯ ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ.