ರಾಜ್ಯಸಭೆ ವಿಪಕ್ಷ ನಾಯಕ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ರಾಜೀನಾಮೆ. ನವದೆಹಲಿ,ಅಕ್ಟೋಬರ್,1,2022(..):ರಾಜ್ಯಸಭೆ ವಿಪಕ್ಷ ನಾಯಕ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ರಾಜೀನಾಮೆ ನೀಡಿದ್ದಾರೆ. ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧಿಸಿದ್ದು ನಿನ್ನೆಯಷ್ಟೆ ನಾಮಪತ್ರ ಸಲ್ಲಿಕೆ ಮಾಡಿದ್ದರು. ಕಾಂಗ್ರೆಸ್ ನಲ್ಲಿ“ಒಬ್ಬವ್ಯಕ್ತಿ,ಒಂದುಹುದ್ದೆ”ನಿಯಮವಿದ್ದು ಈ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭೆ ವಿಪಕ್ಷ ನಾಯಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅಕ್ಟೋಬರ್ 17 ರಂದು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು ಮಲ್ಲಿಕಾರ್ಜುನ ಖರ್ಗೆ ಮತ್ತು ಶಶಿ ತರೂರ್ ಅವರು ಸ್ಪರ್ಧೆಗಿಳಿದಿದ್ದಾರೆ. : - – -