ರಾಜ್ಯಕ್ಕೆ ಪ್ರವೇಶಿಸಿದ ಭಾರತ್ ಜೋಡೋ ಯಾತ್ರೆ ಬಗ್ಗೆ ಲೇವಡಿ ಮಾಡಿದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ. ಮೈಸೂರು,ಸೆಪ್ಟಂಬರ್,30,2022(..):ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಕರ್ನಾಟಕಕ್ಕೆ ಪ್ರವೇಶಿಸಿದ್ದು ಈ ಯಾತ್ರೆ ಕುರಿತು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಲೇವಡಿ ಮಾಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿರುವ ಕೆ.ಎಸ್ ಈಶ್ವರಪ್ಪ, ಭಾರತ ಜೋಡೋ ಅಲ್ಲ ಕಾಂಗ್ರೆಸ್ ಜೋಡೋ ಯಾತ್ರೆ. ಕಾಂಗ್ರೆಸ್ ಎಲ್ಲಾ ಕಡೆ ತೋಡೋ ಆಗಿದೆ. ದೇಶದಲ್ಲಿ ಕಾಂಗ್ರೆಸ್ ಎಲ್ಲಿದೆ. ಚುನಾವಣೆ ಬಳಿಕ ರಾಜ್ಯದಲ್ಲೂ ಕಾಂಗ್ರೆಸ್ ಹುಡುಕಬೇಕಾಗುತ್ತದೆ. ರಾಹುಲ್ ಗಾಂಧಿ ಪ್ರಿಯಾಂಕ ಗಾಂಧಿ ಹೋದ ಕಡೆ ಕಾಂಗ್ರೆಸ್ ಗೆ ಸೋಲನುಭವಿಸಲಿದೆ ಎಂದು ಕೆ.ಎಸ್ ಈಶ್ವರಪ್ಪ ವ್ಯಂಗ್ಯವಾಡಿದರು. : - – – – .