ಮಲೆನಾಡನ್ನ ಉಗ್ರರ ಅಡ್ಡವಾಗಲು ಬಿಡುವುದಿಲ್ಲ- ಗೃಹ ಸಚಿವ ಅರಗ ಜ್ಞಾನೇಂದ್ರ. ಬೆಂಗಳೂರು,ಸೆಪ್ಟಂಬರ್,24,2022(..):ಶಿವಮೊಗ್ಗದಲ್ಲಿ ಶಂಕಿತ ಉಗ್ರರ ಬಂಧನ ವಿಚಾರ ಸಂಬಂಧ ಮಲೆನಾಡನ್ನ ಉಗ್ರರ ಅಡ್ಡವಾಗಲು ಬಿಡುವುದಿಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ಈ ಕುರಿತು ಮಾತನಾಡಿರುವ ಅರಗ ಜ್ಞಾನೇಂದ್ರ, ಮತಾಂಧ ಶಕ್ತಿಗಳ ಸಂಪರ್ಕ ಪಡೆದು ಈ ರೀತಿ ಮಾಡಿದ್ದಾರೆ. ಈ ಬಗ್ಗೆ ಎನ್ ಐಎ ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ. ರಾಷ್ಟ್ರದ ಏಕತೆಗೆ ಭಂಗ ತರುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ಮಲೆನಾಡು ಉಗ್ರರ ಅಡ್ಡವಾಗಲು ಬಿಡಲ್ಲ. ತನಿಖೆ ನಡೆಸಲು ಪೊಲೀಸರಿಗೆ ಮುಕ್ತ ಸ್ವಾತಂತ್ರ್ಯ ನೀಡಿದ್ದೇವೆ. ಕಾಂಗ್ರೆಸ್ ಪಕ್ಷದ ಅವಧಿಯಲ್ಲಿ ಈ ರೀತಿ ಕ್ರಮ ಆಗಿರಲಿಲ್ಲ. ಅಲ್ಪಸಂಖ್ಯಾತರು ಕಾಂಗ್ರೆಸ್ ಪಕ್ಷದ ವೋಟ್ ಬ್ಯಾಂಕ್ ಎಂದು ಅರಗ ಜ್ಞಾನೇಂದ್ರ ತಿಳಿಸಿದರು. : - - - – .