ರಿಟ್ ಅರ್ಜಿ ವಾಪಸ್: ನಟ ದರ್ಶನ್ ಗೆ ಜೈಲೂಟವೇ ಗತಿ ಬೆಂಗಳೂರು,ಜುಲೈ,29,2024 (..):ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಅವರು ಮನೆ ಊಟ, ಹಾಸಿಗೆ ತರಿಸಿಕೊಳ್ಳಲು ಅವಕಾಶ ಕೋರಿ ಸಲ್ಲಿಸಲಾಗಿದ್ದ ರಿಟ್ ಅರ್ಜಿಯನ್ನು ವಕೀಲರು ಹಿಂಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಪ್ರಕರಣದ ಕುರಿತು ಮ್ಯಾಜಿಸ್ಟ್ರೇಟ್ ಕೋರ್ಟ್ ನೀಡಿರುವ ಆದೇಶ ಪ್ರಶ್ನಿಸಬೇಕಿರುವ ಹಿನ್ನೆಲೆಯಲ್ಲಿ ಈ ಹಿಂದಿನ ಹಳೆಯ ಅರ್ಜಿಯನ್ನು ವಾಪಸ್ ಪಡೆದು ಹೊಸದಾಗಿ ಅರ್ಜಿ ಸಲ್ಲಿಸುವ ಕಾರಣದಿಂದಾಗಿ ಅರ್ಜಿಯನ್ನ ವಾಪಸ್ ಪಡೆಯಲಾಗಿದೆ. ಅರ್ಜಿ ವಾಪಸ್ ಪಡೆದು ಹೊಸ ಅರ್ಜಿ ಸಲ್ಲಿಕೆಗೆ ಹೈಕೋರ್ಟ್ ನ ಅವಕಾಶ ನೀಡಿದೆ. ಮ್ಯಾಜಿಸ್ಟ್ರೇಟ್ ಕೋರ್ಟ್ ನೀಡಿರುವ ಆದೇಶವನ್ನು ಹೈಕೋರ್ಟ್​ನಲ್ಲಿ ಪ್ರಶ್ನೆ ಮಾಡುವ ಸಾಧ್ಯತೆ ಇದೆ. ಜೈಲಿನಲ್ಲಿ ಮನೆ ಊಟ, ಮಲಗಲು ಹಾಸಿಗೆ ಮತ್ತು ಕೆಲವು ಪುಸ್ತಕಗಳನ್ನು ತರಿಸಿಕೊಳ್ಳಲು ಅವಕಾಶ ನೀಡುವಂತೆ ಕೋರಿ ನಟ ದರ್ಶನ್ ಹೈಕೋರ್ಟ್​ ಗೆ ರಿಟ್ ಅರ್ಜಿಯನ್ನು ಸಲ್ಲಿಸಿದ್ದರು. : , , , ,