ಎಫ್ ಡಿಎ ಕೆಲಸ ಕೊಡಿಸುವುದಾಗಿ ವಂಚನೆ ಆರೋಪ: ಪಿಎಸ್ ಐ ಅಶ್ವಿನಿ ಅನಂತಪುರ ಸಸ್ಪೆಂಡ್. ಮೈಸೂರು,ಸೆಪ್ಟಂಬರ್,19,2022(..):ಕೆಪಿಎಸ್ಸಿ ವತಿಯಿಂದ ನಡೆದಿದ್ದ ಪ್ರಥಮ ದರ್ಜೆ ಸಹಾಯಕರ ಪರೀಕ್ಷೆಗೆ ಅಭ್ಯರ್ಥಿ ಜತೆ ಡೀಲ್ ಆರೋಪಕ್ಕೆ ಸಂಬಂಧಿಸಿದಂತೆ ಮೈಸೂರಿನ ಎನ್.ಆರ್. ಸಂಚಾರ ವಿಭಾಗದ ಪಿಎಸ್ಐ ಅಶ್ವಿನಿ ಅನಂತಪುರ ಅವರನ್ನ ಅಮಾನತು ಮಾಡಲಾಗಿದೆ. ಪಿಎಸ್ ಐ ಅಶ್ವಿನಿ ಅನಂತಪುರ ವಿರುದ್ಧ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ದಾಖಲೆಗಳ ಸಮೇತ ಆರೋಪ ಮಾಡಿದ ಹಿನ್ನೆಲೆ, ಅಶ್ವಿನಿ ಅನಂತಪುರ ಅವರನ್ನು ಅಮಾನತು ಮಾಡಿ ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ಆದೇಶಿಸಿದ್ದಾರೆ. ಬಾಗಲಕೋಟೆಯ ಸಂಗಮೇಶ್ ಝಳಕಿ ಜತೆ ಹಣದ ವ್ಯವಹಾರದ ಬಗ್ಗೆ ಸಂಭಾಷಣೆ ನಡೆಸಿರೊ ಆಡಿಯೋ ವೈರಲ್ ಆಗಿತ್ತು. ಈ ಸಂಬಂಧ ಎಂ.ಲಕ್ಷ್ಮಣ್ ಅವರು ವಾಟ್ಸಪ್ ಚಾಟಿಂಗ್, ಬ್ಯಾಂಕ್ ವಿವರಗಳನ್ನು ಬಹಿರಂಗಗೊಳಿಸಿದ್ದರು. ಪ್ರಕರಣವನ್ನು ಪರಿಗಣಿಸಿದ ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ವಿಚಾರಣೆ ಬಾಕಿ ಇರಿಸಿ, ತಕ್ಷಣ ಜಾರಿಗೆ ಬರುವಂತೆ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. : - - – -- - .