ಕೆಆರ್ ಎಸ್ ಜಲಾಶಯಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಣೆ ಮಂಡ್ಯ, ಜುಲೈ, 29,2024 (..):ಕಾವೇರಿ ಜಲಾನಯನಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜೀವನದಿ ಕಾವೇರಿ ಅಪಾಯದ ಮಟ್ಟವನ್ನ ಮೀರಿ ಹರಿಯುತ್ತಿದ್ದು ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಕೆಆರ್ ಎಸ್ ಜಲಾಶಯ ಭರ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಕೆಆರ್ ಎಸ್ ಜಲಾಶಯಕ್ಕೆ​​ ಬಾಗಿನ ಅರ್ಪಿಸಲಿದ್ದಾರೆ‌. ಎರಡು ವರ್ಷಗಳ ನಂತರ ಹಳೇ ಮೈಸೂರು ಭಾಗದ ಜೀವನದಿ ಕಾವೇರಿ ಸಂಪೂರ್ಣ ಭರ್ತಿಯಾಗಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಕೆಆರ್​ಎಸ್ ಜಲಾಶಯದಲ್ಲಿ ಬಾಗಿನ ಅರ್ಪಿಸಲಿದ್ದಾರೆ. ಬಳಿಕ ಕಾವೇರಿ ಮಾತೆಗೆ ಪೂಜೆ ಸಲ್ಲಿಸಲಿದ್ದಾರೆ. ಇನ್ನು ಸಿಎಂ ಸಿದ್ದರಾಮಯ್ಯ ತಮ್ಮ ಅವಧಿಯಲ್ಲಿ ಮೂರನೇ ಬಾರಿಗೆ ಕೆಆರ್​ಎಸ್​ಗೆ ಬಾಗಿನ ಅರ್ಪಿಸುತ್ತಿದ್ದಾರೆ. ಮೊದಲ ಬಾರಿಗೆ ಸಿಎಂ ಆದಾಗ 2013 ಹಾಗೂ 2014 ರಲ್ಲಿ ಬಾಗಿನ ಅರ್ಪಿಸಿದ್ದರು. ಬಾಗೀನ ಅರ್ಪಣೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಕಲ ಸಿದ್ದತೆಯನ್ನ ಮಾಡಿಕೊಂಡಿದೆ. ಸಿಎಂ ಸಿದ್ದರಾಮಯ್ಯ ಇಂದು ಕಬಿನಿ ಜಲಾಶಯಕ್ಕೂ ಬಾಗಿನ ಅರ್ಪಣೆ ಮಾಡಲಿದ್ದಾರೆ. : , ,