ಸಿದ್ದರಾಮಯ್ಯ ಕಾಲ್ಗುಣ ಸರಿ ಇಲ್ಲ ಎಂದವರಿಗೆ ತಿರುಗೇಟು ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್ ಮೈಸೂರು,ಜುಲೈ,29,2024 (..):ಸಿದ್ದರಾಮಯ್ಯ ಅಧಿಕಾರಕ್ಕೆ ಬಂದ ಅವಧಿಯಲ್ಲಿ ಸರಿಯಾಗಿ ಮಳೆಯಾಗದೇ ಬರಗಾಲ ಆವರಿಸುತ್ತದೆ. ಅವರ ಕಾಲ್ಗುಣ ಸರಿಯಿಲ್ಲ ಎಂದು ಟೀಕಿಸುತ್ತಿದ್ದವರಿಗೆ ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಸಂಪೂರ್ಣ ಭರ್ತಿಯಾದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ ಎಸ್ ಜಲಾಶಯಕ್ಕೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಬಾಗಿನ ಅರ್ಪಿಸಿದರು. ಇದಕ್ಕೂ ಮುನ್ನ ಮೈಸೂರಿನಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಕಾಲ್ಗುಣ ಸರಿ ಇಲ್ಲ ಅನ್ನುತ್ತಿದ್ದರು. ಅವರು ಬಂದರೇ ಮಳೆ ಬರಲ್ಲ ಎನ್ನುತ್ತಿದ್ದರು‌ ಈಗ ಏನಾಗಿದೆ ನೋಡಿ. ಎಲ್ಲಾ ಜಲಾಶಯಗಳು ಭರ್ತಿಯಾಗಿದೆ. ತಮಿಳುನಾಡಿಗೆ ಅಗತ್ಯಗಿಂತಲೂ ಹೆಚ್ಚು ನೀರು ಹೋಗಿದೆ. ತನಿಳುನಾಡು ಕರ್ನಾಟಕ ಇಬ್ಬರು ಸಂತೋಷವಾಗಿದ್ದಾರೆ. ಎರಡು ರಾಜ್ಯಗಳಲ್ಲಿ ಕೆರೆ ಕಟ್ಟೆ ತುಂಬಿವೆ‌. ಹೀಗಾಗಿ ಇಂದು ಭಾಗಿನ ಅರ್ಪಣೆ ಮಾಡುತ್ತಿದ್ದೇವೆ‌. ಶುಭ ಕಾರ್ಯದ ವೇಳೆ ರಾಜಕೀಯ ಮಾತನಾಡಲ್ಲ‌‌ ಎಂದು ಡಿಕೆ ಶಿವಕುಮಾರ್ ತಿಳಿಸಿದರು. : , , ,