ಸರ್ಕಾರಿ ಅಧಿಕಾರಿ ಹಣೆಗೆ ಕುಂಕುಮ ಇಟ್ಟ ಸಂಸದ ಸುನೀಲ್ ಬೋಸ್ ಮೈಸೂರು,ಜುಲೈ,28,2024 (..):ಚಾಮರಾಜನಗರ ಸಂಸದ ಸುನೀಲ್ ಬೋಸ್ ನಿನ್ನೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದ ವೇಳೆ ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕಿ ಹಣೆಗೆ ಕುಂಕುಮ ಇಟ್ಟಿದ್ದು, ಇದೀಗ ಇದು ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ನಿನ್ನೆ ಚಾಮುಂಡೇಶ್ವರಿ ತಾಯಿ ಗರ್ಭಗುಡಿಯಲ್ಲೇ ಘಟನೆ ನಡೆದಿದೆ. ಆಷಾಡ ಮಾಸದ ಮೂರನೇ ಶುಕ್ರವಾರದಂದು ಚಾಮುಂಡಿ ಬೆಟ್ಟಕ್ಕೆ ಬಂದು ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಲು ಸಂಸದ ಸುನೀಲ್ ಬೋಸ್ ಪ್ರವಾಸೋದ್ಯಮ ಇಲಾಖೆ ನಿರ್ದೇಶಕಿ ಜೊತೆಯಾಗಿ ಬಂದಿದ್ದರು. ಪೂಜೆ ನೆರವೇರಿಸುವ ವೇಳೆ ಬೆಂಬಲಿಗರ ಸಮ್ಮುಖದಲ್ಲೇ ನಿರ್ದೇಶಕಿ ಸವಿತಾ ಹಣೆಗೆ ಸಂಸದ ಸುನೀಲ್ ಬೋಸ್ ಕುಂಕುಮ ಇಟ್ಟಿದ್ದಾರೆ. ಗರ್ಭ ಗುಡಿಯಲ್ಲಿ ನಿಂತು ವಿಶೇಷ ಪೂಜೆ ಸಲ್ಲಿಸಿದ್ದು ಪೂಜೆ ನೆರವೇರಿಸುವ ವೇಳೆ ಬೆಂಬಲಿಗರ ಸಮ್ಮುಖದಲ್ಲೇ ಸರ್ಕಾರಿ ಅಧಿಕಾರಿ ಸವಿತಾ ಹಣೆಗೆ ಕುಂಕುಮ ಇಟ್ಟಿದ್ದಾರೆ. ಇದೀಗ ಸುನೀಲ್‌ಬೋಸ್ ನಡೆ ಸಾರ್ವಜನಿಕ ವಲಯದಲ್ಲಿ ಬಾರಿ ಚರ್ಚೆಗೆ ಕಾರಣವಾಗಿದೆ. ಲೋಕಸಭಾ ಚುನಾವಣೆ ಸಂಧರ್ಭದಲ್ಲಿ ತಮಗೆ ಮದುವೆ ಆಗಿಲ್ಲ ಎಂದು ಸುನೀಲ್‌ಬೋಸ್ ಅಫಿಡೆವಿಟ್ ಸಲ್ಲಿಸಿದ್ದರು. ಈ ಬಗ್ಗೆ ಚುನಾವಣಾ ಅಧಿಕಾರಿಗಳಿಗೆ ಚಾಮರಾಜನಗರ ಬಿಜೆಪಿ ಸದಸ್ಯರು ದೂರು ನೀಡಿದ್ದರು. ಸುನೀಲ್‌ಬೋಸ್, ಸವಿತಾ ಜೊತೆಯಲ್ಲಿ ಇರುವ ಪೋಟೋಗಳನ್ನು ನೀಡಿ ದೂರು ಕೊಟ್ಟಿದ್ದರು. : , , , ,