ಕೋಚಿಂಗ್ ಸೆಂಟರ್ ಗೆ ನೀರು ನುಗ್ಗಿ ಮೂವರು ಸಾವು: ಇಬ್ಬರ ಬಂಧನ ನವದೆಹಲಿ,ಜುಲೈ, 28,2024 (..):ಕೋಚಿಂಗ್ ಸೆಂಟರ್ ಗೆ ನೀರು ನುಗ್ಗಿ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ನವದೆಹಲಿಯಲ್ಲಿ ನಡೆದಿದೆ. ದೆಹಲಿಯ ಓಲ್ಡ್ ರಾಜಿಂದರ್ ನಗರ ಪ್ರದೇಶದಲ್ಲಿರುವ ಐಎಎಸ್​ ತರಬೇತಿ ಕೇಂದ್ರಕ್ಕೆ ನೀರು ನುಗ್ಗಿದ್ದು ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಕೇರಳ ಮೂಲದ ನವೀನ್, ಹೈದರಾಬಾದ್ ಮೂಲದ ತಾನಿಯಾ ಉತ್ತರ ಪ್ರದೇಶ ಮೂಲದ ಶ್ರೇಯಾ ಯಾದವ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಸದ್ಯ ಕೋಚಿಂಗ್‌ ಸೆಂಟರ್‌ ಮಾಲೀಕ ಹಾಗೂ ಸಂಯೋಜಕರನ್ನು ಬಂಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸುರಿದ ಭಾರಿ ಮಳೆಗೆ ಕೋಚಿಂಗ್‌ ಕೇಂದ್ರದ ನೆಲಮಾಳಿಗೆಯು ಪ್ರವಾಹಕ್ಕೆ ಸಿಲುಕಿತು. ಈ ವೇಳೆ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್ಡಿಆರ್‌ಎಫ್), ಸ್ಥಳೀಯ ಪೊಲೀಸರು ಮತ್ತು ಅಗ್ನಿಶಾಮಕ ಇಲಾಖೆಯ ರಕ್ಷಣಾ ಕಾರ್ಯಾಚರಣೆಯ ನಂತರ ಅವರ ಶವಗಳನ್ನು ಸ್ಥಳದಿಂದ ಹೊರತೆಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. : , , ,