ಮಳೆಗೆ ಗೋಡೆ ಕುಸಿದು ಗಂಭೀರ ಗಾಯಗೊಂಡಿದ್ಧ ಯುವಕ ಸಾವು. ಶಿವಮೊಗ್ಗ,ಸೆಪ್ಟಂಬರ್,12,2022(..):ಮಳೆಗೆ ಗೋಡೆ ಕುಸಿದು ಗಂಭೀರ ಗಾಯಗೊಂಡಿದ್ಧ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆ ಸಿದ್ಧಾಪುರ ತಾಲ್ಲೂಕಿನ ಕ್ಯಾದಗಿ ಗ್ರಾಮದ ಚಂದ್ರಶೇಖರ್(26) ಮೃತಪಟ್ಟ ಯುವಕ. ನಿನ್ನೆ ರಾತ್ರಿ ಸುರಿದ ಮಳೆಗೆ ಮನೆಗೋಡೆ ಕುಸಿದು ಚಂದ್ರಶೇಖರ್ ಗಂಭೀರವಾಗಿ ಗಾಯಗೊಂಡಿದ್ದನು. ಈ ಹಿನ್ನೆಲೆಯಲ್ಲಿ ಚಂದ್ರಶೇಖರ್ ನನ್ನ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಚಂದ್ರಶೇಖರ್ ಮೃತಪಟ್ಟಿದ್ದಾನೆ. : - –- – .