ಟ್ವಿಟ್ಟರ್’ನಲ್ಲಿ ಸಿಎಂ ಬೊಮ್ಮಾಯಿಗೆ ‘ದಮ್ಮಾಸ್ತ್ರ’ ಬಿಟ್ಟ ಮಾಜಿ ಸಿಎಂ ಸಿದ್ದರಾಮಯ್ಯ! ಬೆಂಗಳೂರು, ಸೆಪ್ಟೆಂಬರ್ 11, 2022 (..): ಭ್ರಷ್ಟಾಚಾರವನ್ನೇ ವಿಷಯವನ್ನಾಗಿಟ್ಟು ಚುನಾವಣೆ ಎದುರಿಸುವ ಧಮ್ ನಿಮಗಿದೆಯೇ? ಬಸವರಾಜ ಬೊಮ್ಮಾಯಿ ಎಂದು ಪ್ರಶ್ನಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೆ ಸಿಎಂ ‘ದಮ್ಮಾಸ್ತ್ರ’ ಪ್ರಯೋಗಿಸಿದ್ದಾರೆ. ನಿನ್ನೆ ನಡೆದ ಜನಸ್ಪಂದನಾ ಸಭೆಯಲ್ಲಿ ದಮ್ಮಿದ್ದರೆ ಬಿಜೆಪಿ ಯಾತ್ರೆ ಹಿಮ್ಮೆಟ್ಟಿಸಿ ಎಂದು ಸವಾಲು ಹಾಕಿದ್ದ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಈ ಕುರಿತು ಟ್ವಿಟ್ಟರ್ ನಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು ಭ್ರಷ್ಟಾಚಾರದ ಬ್ರಹ್ಮಾಸ್ತ್ರ ಪ್ರಯೋಗಿಸಿದ್ದಾರೆ. ಇಲ್ಲಿದೆ ಸಿದ್ದರಾಮಯ್ಯ ಅವರ ಟ್ವೀಟ್ ಬ್ರಹ್ಮಾಸ್ತ್ರ… *ಭ್ರಷ್ಟಾಚಾರವನ್ನೇ ವಿಷಯವನ್ನಾಗಿಟ್ಟು ಚುನಾವಣೆ ಎದುರಿಸುವ ಧಮ್ ನಿಮಗಿದೆಯೇ @ ಅವರೇ? ನಿಮಗೆ ಆ ಧಮ್ ಇಲ್ಲ. ಕೊನೆಗೆ ಹಿಂದು-ಮುಸ್ಲಿಮ್, ಮಂದಿರ ಮಸೀದಿ, ಹಿಜಾಬ್ – ಕೇಸರಿ ಶಾಲುಗಳ ವಿವಾದದಲ್ಲಿಯೆ ನಿಮ್ಮ ಪ್ರಚಾರ ಕೊನೆಗೊಳ್ಳುವುದು. ಬೇರೆ ದಾರಿ ನಿಮಗಿಲ್ಲ. *ಭ್ರಷ್ಟಾಚಾರದ ಬಗ್ಗೆ ಸಾರ್ವಜನಿಕ ಚರ್ಚೆಗೆ ನೀವು ಸಿದ್ಧರಿದ್ದಿರಾ @ ಅವರೇ? ನಮ್ಮ ಪಕ್ಷ ಸಿದ್ಧ ಇದೆ. ನೀವು ಸಿದ್ಧ ಇದ್ದರೆ ಸಾರ್ವಜನಿಕ ಚರ್ಚೆಗೆ ಸ್ಥಳ-ಸಮಯ ನೀವೇ ನಿರ್ಧರಿಸಿ ತಿಳಿಸಿ ನಾನು ಬರ್ತೇನೆ. ಧಮ್ ಎಂದರೆ ಧಮ್ ಬಿರಿಯಾನಿ ಎಂದು ನೀವು ತಿಳಿದುಕೊಂಡ ಹಾಗಿದೆ. *ನನ್ನ ಅಧಿಕಾರವಧಿಯ ಹಗರಣಗಳನ್ನು ಬಯಲಿಗೆಳೆಯುತ್ತೇವೆ ಎಂದು ಕಳೆದ ಕೆಲವು ದಿನಗಳಿಂದ @BJP4Karnataka ನಾಯಕರು ಧಮ್ಕಿ ಹಾಕುತ್ತಲೇ ಇದ್ದಾರೆ.. ಧಮ್ ಇದ್ದರೆ ಮೊದಲು ಆ ಕೆಲಸ ಮಾಡಿ. ನಾನು ಅದನ್ನು ಎದುರಿಸಲು ಸದಾ ಸಿದ್ಧ. ಈ ಬ್ಲಾಕ್ ಮೇಲ್ ತಂತ್ರಗಳನ್ನೆಲ್ಲ ನಿಮ್ಮವರ ಮೇಲೆ ಬಳಸಿಕೊಳ್ಳಿ. *ನನ್ನ ಆಡಳಿತ ಕಾಲದ ಹಗರಣಗಳನ್ನು ಬಯಲಿಗೆಳೆಯುತ್ತೇವೆ ಎಂದು ಕೆಲವು ದಿನಗಳಿಂದ @BJP4Karnataka ನಾಯಕರು ಹೇಳುತ್ತಲೇ ಇದ್ದಾರೆ. ಮೊನ್ನೆ ಮಾಜಿ ಮುಖ್ಯಮಂತ್ರಿ @ ಅವರಿಗೆ ಹೈಕೋರ್ಟ್ ನೋಟೀಸ್ ನೀಡಿದ್ದನ್ನು ನೋಡಿದರೆ ಇವರು ಹೇಳಿದ್ದು ನನಗೋ, ಯಡಿಯೂರಪ್ಪನವರಿಗೋ? ಎಂದು ಗೊಂದಲವಾಗುತ್ತಿದೆ. 4 *ಮುಖ್ಯಮಂತ್ರಿ @ ಅವರೇ, ನಮಗೆ ಸವಾಲು ಹಾಕುವ ಧಮ್ ನಿಮಗಿಲ್ಲ ಎನ್ನುವುದು ಸ್ವತಃ ನಿಮಗೂ ಗೊತ್ತು. ನಿಮಗೆ ಧಮ್ ಇದ್ದರೆ ಮೊದಲು ನಿಮ್ಮ ಸಂಪುಟದಲ್ಲಿರುವ ಖಾಲಿ ಸ್ಥಾನಗಳನ್ನು ತುಂಬಿ ಬಿಡಿ. ಕನಿಷ್ಠ ಬಸವನಗೌಡ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳಿ. ಆ ಮೇಲೆ ನಿಮ್ಮ ಧಮ್ ನೋಡೋಣ. *ದಮ್ ಇದ್ದರೆ @BJP4Karnataka ಯಾತ್ರೆ ಹಿಮ್ಮೆಟ್ಟಿಸಿ ಎಂದು @ ಸವಾಲು ಹಾಕಿದ್ದಾರೆ. ನಾವು ಯಾಕೆ ಹಿಮ್ಮೆಟ್ಟಿಸಲು ಹೋಗ್ಬೇಕು? ಸಮಾವೇಶದಲ್ಲಿಯ ಖಾಲಿ ಕುರ್ಚಿಗಳನ್ನು ನೋಡಿದರೆ ನಿಮ್ಮ “ಜಾತ್ರೆ”ಯನ್ನು ನಮ್ಮ ಜನರೇ ಹಿಮ್ಮೆಟ್ಟಿಸಿದ್ದಾರೆ ಎಂದು ನಿಮಗೆ ಅನಿಸಲ್ವಾ *‘ಜನಮರ್ದನ’ ಅಲ್ಲಲ್ಲ, ‘ಜನಸ್ಪಂದನ’ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ @ ಅವರ ವೀರಾವೇಶದ ಭಾಷಣ ಕೇಳಿ ಖುಷಿಯಾಯಿತು. ಸಂಘ ಪರಿವಾರ ಇಂತಹ ಜೋರು ಮಾತುಗಳನ್ನು ಸಹಿಸವುದಿಲ್ಲ, ಇದೇ ರೀತಿ ಮಾತನಾಡಿಯೇ ಪಾಪ @ ಜೈಲು ಸೇರಿದ್ದು ಎನ್ನುವುದು ನೆನಪಿರಲಿ. *ಕಾಂಗ್ರೆಸ್ ಕಾಲದ ಹಗರಣಗಳನ್ನು ಬಯಲುಗೊಳಿಸುತ್ತೇವೆ ಎಂದು @BJP4Karnataka ಬ್ಲಾಕ್ ಮೇಲ್ ಗೆ ಇಳಿದಿದೆ. ಈ ಹುಸಿ ಬೆದರಿಕೆಗೆ ನಾವು ಹೆದರುವುದಿಲ್ಲ. ಧೈರ್ಯ ಇದ್ದರೆ ತನಿಖೆ ಬೇಗ ಶುರುಮಾಡಿ. ನಾವು ತನಿಖೆ ಎದುರಿಸಲು ಸಿದ್ಧ ಇದ್ದೇವೆ. *ಭ್ರಷ್ಟ ಸಚಿವರ ಮಾತಿಗೆ ಅಧಿಕಾರಿಗಳು ಕವಡೆ ಕಿಮ್ಮತ್ತಿನ ಬೆಲೆ ಕೊಡುತ್ತಿಲ್ಲ. ಜನ ಕಂಗಾಲಾಗಿ ಹೋಗಿದ್ದಾರೆ. ಆಡಳಿತ ಯಂತ್ರವೇ ಕುಸಿದು ಹೋಗಿದೆ. ಆದಷ್ಟು ಬೇಗ ಚುನಾವಣೆ ನಡೆದು @BJP4Karnataka ಸರ್ಕಾರ ತೊಲಗಿ ಹೋದರೆ ಸಾಕು ಎಂದು ಜನ ಕಾಯುತ್ತಿದ್ದಾರೆ. *ರಾಜ್ಯ @BJP4Karnataka ಸರ್ಕಾರದ ಕಮಿಷನ್ ವಸೂಲಿಯ ಪೀಡನೆಯಿಂದ ಬೇಸತ್ತ ಗುತ್ತಿಗೆದಾರರು ರಾಜ್ಯದಾದ್ಯಂತ ಕಾಮಗಾರಿಗಳನ್ನು ನಿಲ್ಲಿಸಿದ್ದಾರೆ. ರಸ್ತೆ, ಸೇತುವೆ, ವಸತಿ, ಶಾಲೆ, ಆಸ್ಪತ್ರೆ ಕಟ್ಟಡಗಳು ಅರ್ಧಕ್ಕೆ ನಿಂತಿವೆ. ಅತಿವೃಷ್ಟಿ ಪರಿಹಾರ ಕಾಮಗಾರಿಗಳೂ ನಡೆಯುತ್ತಿಲ್ಲ.