ಬಸ್ ಡಿಪೋದಲ್ಲೇ ಕೆಎಸ್ ಆರ್ ಟಿಸಿ ನೌಕರ ಆತ್ಮಹತ್ಯೆಗೆ ಶರಣು. ಕಲಬುರಗಿ,ಸೆಪ್ಟಂಬರ್,10,2022(..):ಬಸ್ ಡಿಪೋದಲ್ಲಿ ಕೆಎಸ್ ಆರ್ ಟಿಸಿ ನೌಕರ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲ್ಬುರ್ಗಿ ಜಿಲ್ಲೆ ಸೇಡಂನಲ್ಲಿ ನಡೆದಿದೆ. ಅಫಜಲಪುರ ತಾಲೂಕಿನ ಗುಡೂರ ಗ್ರಾಮದ ಭೀಮಾಶಂಕರ (45 ) ಆತ್ಮಹತ್ಯೆಗೆ ಶರಣಾದ ನೌಕರ. ಡಿಪೋ ಒಳಗಿನ ಸಿಬ್ಬಂದಿ ವಿಶ್ರಾಂತಿ ಕೋಣೆಯ ಹಿಂಬದಿಯಲ್ಲಿರುವ ತಾತ್ಕಾಲಿಕ ಶೆಡ್ ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಇವರು ಒಂದು ತಿಂಗಳ ಹಿಂದಷ್ಟೆ ಚಿಂಚೋಳಿಯಿಂದ ಸೇಡಂಗೆ ವರ್ಗಾವಣೆಯಾಗಿ ಬಂದಿದ್ದರು. ಮೇಲಾಧಿಕಾರಿಗಳ ವಿರುದ್ಧ ಕಿರುಕುಳ ಆರೋಪ ಕೇಳಿ ಬಂದಿದೆ. ಈ ಕುರಿತು ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : –- -