ಮಳೆಯಲ್ಲಿ ಮುಳುಗಿರುವ ಮನೆಗೆ ತಲಾ 5 ಲಕ್ಷ ಪರಿಹಾರ ನೀಡಿ- ಸರ್ಕಾರಕ್ಕೆ ರಣದೀಪ್ ಸಿಂಗ್ ಸುರ್ಜೇವಾಲ ಒತ್ತಾಯ. ಬೆಂಗಳೂರು,ಸೆಪ್ಟಂಬರ್,9,2022(..):ಪ್ರವಾಹದಿಂದ ಬೆಂಗಳೂರು ನಲುಗುತ್ತಿದ್ದು, ಈ ಅವಾಂತರಕ್ಕೆ ಬಿಜೆಪಿಯೇ ಕಾರಣ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಆರೋಪಿಸಿದ್ದಾರೆ. ಇಂದು ಮಾಧ್ಯಮಗಳ ಜತೆ ಮಾತನಾಡಿದ ರಣದೀಪ್ ಸಿಂಗ್ ಸುರ್ಜೇವಾಲ, ಭಾರಿ ಮಳೆಯಿಂದಾಗಿ ಬೆಂಗಳೂರು ಜನರು ತತ್ತರಿಸಿದ್ದಾರೆ. ಬಿಜೆಪಿ ಸರ್ಕಾರದ ವೈಪಲ್ಯದಿಂದ ಈ ಅವಾಂತರ ಸೃಷ್ಠಿಯಾಗಿದೆ. ಮಳೆ ನೀರು ಹೋಗಲು ಜಾಗವಿಲ್ಲ. ಸರ್ಕಾರ ಒತ್ತುವರಿ ತೆರವು ಮಾಡಿಲ್ಲ. ಒತ್ತುವರಿ ತೆರವು ಮಾಡಲು ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ..? ಮಳೆಯಲ್ಲಿ ಮುಳುಗಿರುವ ಮನೆಗಳಿಗೆ ತಲಾ 5 ಲಕ್ಷ ಪರಿಹಾರ ನೀಡಿ ಎಂದು ರಾಜ್ಯ ಸರ್ಕಾರಕ್ಕೆ ರಣದೀಪ್ ಸಿಂಗ್ ಸುರ್ಜೇವಾಲ ಒತ್ತಾಯಿಸಿದರು. : 5 - – – -