ಸೆಪ್ಟೆಂಬರ್ 30ಕ್ಕೆ ಬಹುನಿರೀಕ್ಷಿತ ‘ತೋತಾಪುರಿ’ ರಿಲೀಸ್ ಬೆಂಗಳೂರು, ಸೆಪ್ಟೆಂಬರ್ 07, 2022 (..):ಈ ವರ್ಷದ ಬಹುನಿರೀಕ್ಷಿತ ಚಿತ್ರ ತೋತಾಪುರಿ ಬಿಡುಗಡೆಗೆ ಸಿದ್ಧಗೊಂಡಿದೆ. ಸೆಪ್ಟೆಂಬರ್ 30 ರಂದು ತೋತಾಪುರಿ ಸಿನಿಮಾ ರಿಲೀಸ್ ಮಾಡಲು ಚಿತ್ರತಂಡ ಸಿದ್ಧತೆ ಮಾಡಿಕೊಂಡಿದೆ. ಗೋವಿಂದಾಯ ನಮಃ, ಶ್ರಾವಣಿ ಸುಬ್ರಹ್ಮಣ್ಯ ಮತ್ತು ಶಿವಲಿಂಗ ಹಿಟ್ ಚಿತ್ರಗಳ ನಿರ್ಮಾಪಕ ಕೆಎ ಸುರೇಶ್ ಮೊನಿಫ್ಲಿಕ್ಸ್ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ತೋತಾಪುರಿ ನಿರ್ಮಿಸಿದ್ದಾರೆ. ನಿರ್ದೇಶಕ ವಿಜಯ ಪ್ರಸಾದ್ ಜೊತೆ ಸಿದ್ಲಿಂಗು, ನೀರ್​​ದೋಸೆ, ಪೆಟ್ರೋಮ್ಯಾಕ್ಸ್ ಸಿನಿಮಾಗಳನ್ನು ಮಾಡಿರುವ ಸುಮನಾ ರಂಗನಾಥ್. ಈ ಚಿತ್ರದಲ್ಲಿ ಸಿಸ್ಟರ್ ವಿಕ್ಟೋರಿಯಾ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಡಾಲಿ ಧನಂಜಯ್ ,ವೀಣಾ ಸುಂದರ್ ಮತ್ತು ದತ್ತಣ್ಣ ಮುಂತಾದವರ ತಾರಾಬಳಗವಿದೆ, ಚಿತ್ರಕ್ಕೆ ಅನೂಪ್ ಸೀಳಿನ್ ಸಂಗೀತ ನೀಡಿದ್ದಾರೆ.