ಸ್ಕೂಟಿಗೆ ನೀರಿನ ಟ್ಯಾಂಕರ್ ಡಿಕ್ಕಿ: ಮಹಿಳೆ ಸ್ಥಳದಲ್ಲೇ ದುರ್ಮರಣ. ಬೆಂಗಳೂರು,ಸೆಪ್ಟಂಬರ್,6,2022(..):ಸ್ಕೂಟಿಗೆ ನೀರಿನ ಟ್ಯಾಂಕರ್ ಡಿಕ್ಕಿಯಾಗಿ ಮಹಿಳೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಲಗ್ಗೆರೆ ಬಳಿ ಇರುವ ಗ್ರೇಸ್ ಪಬ್ಲಿಕ್ ಶಾಲೆ ಮುಂಭಾಗ ಈ ಘಟನೆ ನಡೆದಿದೆ. ಸ್ಕೂಟಿಯಲ್ಲಿ ಮುಂದೆ ಹೋಗುತ್ತಿದ್ದ ಮಹಿಳೆಗೆ ಟ್ಯಾಂಕರ್ ಡಿಕ್ಕಿಯಾಗಿದ್ದು ನಂತರ ಮಹಿಳೆಗೆ ಕೆಳಕ್ಕೆ ಬಿದ್ದಿದ್ದಾರೆ. ಈ ವೇಳೆ ಟ್ಯಾಂಕರ್ ಮಹಿಳೆ ಮೇಲೆ ಹರಿದಿದೆ. ಟ್ಯಾಂಕರ್ ಡಿಕ್ಕಿಯಿಂದಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು ಈ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. : -- – --