ಮುರುಘಾ ಶ್ರೀ ವಿರುದ್ಧ ಪೋಕ್ಸೋ ಕಾಯ್ದೆ ಪ್ರಕರಣ: 5ನೇ ಆರೋಪಿ ಪೊಲೀಸರಿಗೆ ಶರಣು. ಚಿತ್ರದುರ್ಗ,ಸೆಪ್ಟಂಬರ್,6,2022(..):ಮುರಾಘಾ ಮಠದ ಶಿವಮೂರ್ತಿ ಶ್ರೀಗಳ ವಿರುದ್ಧ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ , ಪೋಕ್ಸೋ ಕಾಯ್ದೆಯಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ 5ನೇ ಆರೋಪಿ ವಕೀಲ ಗಂಗಾಧರಯ್ಯ ಪೊಲೀಸರ ಬಳಿ ಶರಣಾಗಿದ್ದಾರೆ. ಪ್ರಕರಣದ 5ನೇ (A5) ಆರೋಪಿಯಾಗಿರುವ ವಕೀಲ ಗಂಗಾಧರಯ್ಯ ಮಂಗಳವಾರ ಪೊಲೀಸರಿಗೆ ಶರಣಾಗಿದ್ದು, ಚಿತ್ರದುರ್ಗದ ಡಿವೈಎಸ್​ಪಿ ಕಚೇರಿಯಲ್ಲಿ ಗಂಗಾಧರಯ್ಯ ವಿಚಾರಣೆ ನಡೆಯುತ್ತಿದೆ. ಪ್ರಕರಣದ 3ನೇ ಆರೋಪಿಯಾಗಿರುವ ಮಠದ ಉತ್ತರಾಧಿಕಾರಿ ಮತ್ತು 4ನೇ ಆರೋಪಿ ಪರಮಶಿವಯ್ಯ ಈವರೆಗೆ ಪೊಲೀಸರಿಗೆ ಸಿಕ್ಕಿಲ್ಲ. ಹೀಗಾಗಿ ಅವರ ಬಂಧನಕ್ಕಾಗಿ ಹುಡುಕಾಟ ಮುಂದುವರಿದಿದೆ. ಇನ್ನು ಮುರುಘಾ ಶ್ರೀಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. : - - - - 5th - – .