ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ಆಟೋ ಡ್ರೈವರ್ ಶವವಾಗಿ ಪತ್ತೆ ಮೈಸೂರು,ಜುಲೈ,28,2024 (..):ಸಾಲಗಾರರ ಕಿರುಕುಳಕ್ಕೆ ಬೇಸತ್ತು ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ಆಟೋ ಡ್ರೈವರ್ ಶವವಾಗಿ ಪತ್ತೆಯಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಆಟೋ ಡ್ರೈವರ್ ಪ್ರಸಾದ್(40) ಶವವಾಗಿ ಪತ್ತೆಯಾಗಿರುವವರು. ಹುಣಸೂರು ತಾಲೂಕಿನ ಬಿಳಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಟುವಾಡಿ ಗ್ರಾಮದ ನಿವಾಸಿಯಾಗಿರುವ ಪ್ರಸಾದ್ ಜುಲೈ 20 ರಂದು ಕಟ್ಟುವಾಡಿಯಿಂದ ಕಾಣೆಯಾಗಿದ್ದರು. ಫೈನಾನ್ಸ್ ಮಧು ಬಳಿ ಕಿರಣ್ ಜಾಮೀನು ನೀಡಿ ಹಣ ಸಾಲ ಕೊಡಿಸಿದ್ದ. ನಿಗದಿತ ಸಮಯಕ್ಕೆ ಹಣ ಹಿಂದಿರುಗಿಸಿಲ್ಲ. ಹೀಗಾಗಿ ಕಿರಣ್ ಆಗಾಗ ಮನೆಗೆ ಬಂದು ಕಿರುಕುಳ ನೀಡುತ್ತಿದ್ದ. ಇದರಿಂದ ಬೇಸತ್ತ ಪ್ರಸಾದ್ ಡೆತ್ ನೋಟ್ ಬರೆದು ನಾಪತ್ತೆಯಾಗಿದ್ದರು. ನನ್ನ ಸಾವಿಗೆ ಫೈನಾನ್ಸ್ ಮಧು ಹಾಗೂ ಟೆಂಪೋ ಕಿರಣ ಕಾರಣ ಎಂದು ಡೆತ್ ನೋಟ್ ಬರೆದು ಡೆತ್‌ನೋಟ್ ಆಟೋದಲ್ಲಿ ಇಟ್ಟು ನಾಪತ್ತೆಯಾಗಿದ್ದರು. ಇದೀಗ ಹೆಚ್.ಡಿ.ಕೋಟೆಯ ಸರಗೂರಿನ ಕಪಿಲಾ ನದಿ ದಂಡೆ ಸೋಮೇಶ್ವರ ದೇವಸ್ಥಾನದ ಬಳಿ ನೀರಿನಲ್ಲಿ ಪ್ರಸಾದ್ ಶವವಾಗಿ ಪತ್ತೆಯಾಗಿದ್ದಾರೆ. ಈ ಕುರಿತು ಸರಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : , , ,