ಬೆಂಗಳೂರಿನಲ್ಲಿ ಮಹಾಮಳೆಗೆ ಜನವಸತಿ ಪ್ರದೇಶಗಳು ಜಲಾವೃತ: ಜನರು ಬದುಕು ತತ್ತರ. ಬೆಂಗಳೂರು,ಸೆಪ್ಟಂಬರ್,6,2022(..):ಭಾರಿ ಮಳೆಯಿಂದಾಗಿ ರಾಜ್ಯ ರಾಜಧಾನಿ ಬೆಂಗಳೂರಿನ ಜನವಸತಿ ಪ್ರದೇಶಗಳು ಜಲಾವೃತಗೊಂಡಿದ್ದು, ರಸ್ತೆಗಳೆಲ್ಲ ಕೆರೆಯಂತಾಗಿ ವಾಹನ ಸಂಚಾರ ಅಸ್ತವ್ಯಸ್ತವಾಗಿದೆ. ಅಕ್ಷರಶಃ ಬೆಂಗಳೂರಿನ ಜನತೆ ನಲುಗಿ ಹೋಗಿದ್ದಾರೆ. ರಾಜ್ಯದಲ್ಲಿ 14 ವರ್ಷದ ಬಳಿಕ ದಾಖಲೆ ಪ್ರಮಾಣದ ಮಳೆ ಸುರಿದಿದೆ. ಬೆಂಗಳೂರಿನಲ್ಲಿ ಮನೆಗಳು, ಐಟಿ-ಬಿಟಿ ಕಂಪನಿಗಳು, ಅಪಾರ್ಟ್​ವೆುಂಟ್​ ಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಠಿಯಾಗಿದೆ. ನೀರು ಹರಿಯುವ ಮೂಲಗಳಾದ ಕೆರೆ, ಕಾಲುವೆಗಳನ್ನು ಒತ್ತುವರಿ ಮಾಡಿಕೊಂಡು ಮನೆ ಮತ್ತು ಬಡಾವಣೆಗಳನ್ನು ನಿರ್ವಿುಸಿಕೊಂಡ ಪರಿಣಾಮ ಪ್ರತಿ ಬಾರಿ ಮಳೆ ಬಂದಾಗಲೂ ನೀರು ಉಕ್ಕಿ ಹರಿದು ಪ್ರವಾಹ ಸೃಷ್ಟಿಯಾಗುತ್ತಿದೆ. ಭಾರಿ ಮಳೆಯಿಂದಾಗಿ ಕೋಳಿ ಫಾರ್ಮ್ ಗೆ ನೀರು ನುಗ್ಗಿ 11 ಸಾವಿರ ಕೋಳಿಗಳು ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನ ನಾರಾಯಣಪುರದಲ್ಲಿ ನಡೆದಿದೆ. ರಾಮಕೃಷ್ಣ ಎಂಬುವವರ ಕೋಳಿ ಫಾರ್ಮ್ ಗೆ ಕೆರೆ ನೀರು ನುಗ್ಗಿ ಈ ದುರಂತ ಸಂಭವಿಸಿದೆ. ಇನ್ನು ಬೆಂಗಳೂರಿನಲ್ಲಿ ಸೆಪ್ಟೆಂಬರ್ 9 ರವರೆಗೆ ಇದೇ ಪರಿಸ್ಥಿತಿ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಹಿನ್ನೆಲೆಯಲ್ಲಿ ಬಹುತೇಕ ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕೊರೋನಾ ಅವಧಿಯಲ್ಲಿ ಇದ್ದಂತೆ ಆನ್ ಲೈನ್ ತರಗತಿಗಳನ್ನು ನಡೆಸಲಾಗುತ್ತಿದೆ. ಈಗಾಗಲೇ ಕಚೇರಿ ಆರಂಭಿಸಿದ್ದ ಕೆಲವೊಂದು ಐಟಿ ಕಂಪನಿಗಳೂ ಸಹ ತಮ್ಮ ಉದ್ಯೋಗಿಗಳಿಗೆ ಮನೆಯಿಂದಲೇ ಕಾರ್ಯ ನಿರ್ವಹಿಸಲು ಸೂಚಿಸಿವೆ ಎನ್ನಲಾಗಿದೆ. : – - - – … , 6, 2022 (..): , . . 14 . , - , , . , . , . 11,000 , . . , 9. . .: / // 9