ಜನಪ್ರತಿನಿಧಿಗಳು ಜವಾಬ್ದಾರಿಯಿಂದ ನಡೆದುಕೊಳ್ಳಬೇಕು- ಅರವಿಂದ ಲಿಂಬಾವಳಿಗೆ ಸಚಿವ ಅಶ್ವಥ್ ನಾರಾಯಣ್ ಪರೋಕ್ಷ ಟಾಂಗ್. ಬೆಂಗಳೂರು,ಸೆಪ್ಟಂಬರ್,5,2022(..):ಕಳೆದ ಎರಡು ದಿನಗಳ ಹಿಂದೆ ಸಮಸ್ಯೆ ಹೇಳಿಕೊಳ್ಳಲು ಬಂಧ ಮಹಿಳೆ ಮೇಲೆ ದರ್ಪ ತೋರಿದ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ವಿರುದ್ಧ ಸಚಿವ ಅಶ್ವಥ್ ನಾರಾಯಣ್ ಪರೋಕ್ಷ ಟಾಂಗ್ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಅಶ್ವಥ್ ನಾರಾಯಣ್, ಜನಪ್ರತಿನಿಧಿಗಳು ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ನಮ್ಮ ಕೋಪ ತಾಪಗಳನ್ನ ನಿಯಂತ್ರಣ ಮಾಡಿಕೊಳ್ಳಬೇಕು. ನಾವು ಜನ ಸೇವಕರು, ಜನರಿಗಾಗಿ ನಾವು ಸಿದ್ಧರಾಗಿರಬೇಕು ಎಂದು ಸಲಹೆ ನೀಡಿದ್ದಾರೆ. ಮನವಿ ಸಲ್ಲಿಸಲು ಬಂದಿದ್ಧ ಮಹಿಳೆಗೆ ನಿಂದಿಸಿ ದರ್ಪ ತೋರಿದ ಆರೋಪ ಶಾಸಕ ಅರವಿಂದ ಲಿಂಬಾವಳಿ ವಿರುದ್ಧ ಕೇಳಿ ಬಂದಿತ್ತು. ಈ ಸಂಬಂಧ ವಿಡಿಯೋ ವೈರಲ್ ಆಗಿತ್ತು. : - --