ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಸರ್ಕಾರದಿಂದ ಅನುದಾನ ತಾರತಮ್ಯ- ಪ್ರಿಯಾಂಕ್ ಖರ್ಗೆ ಆರೋಪ. ಕಲ್ಬುರ್ಗಿ,ಸೆಪ್ಟಂಬರ್,3,2022(..):ಭ್ರಷ್ಟಾಚಾರದ ಬಗ್ಗೆ ಮಾತನಾಡಿದ್ದಕ್ಕೆ ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಅನುದಾನ ನೀಡುವಲ್ಲಿ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಆರೋಪ ಮಾಡಿದ್ದಾರೆ. ಈ ಕುರಿತು ಮಾತನಾಡಿದ ಶಾಸಕ ಪ್ರಿಯಾಂಕ್ ಖರ್ಗೆ, ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಅನುದಾನ ನೀಡುವಲ್ಲಿ ತಾರತಮ್ಯ ಮಾಡುತ್ತಿದೆ. ಸರ್ಕಾರದ ಭ್ರಷ್ಟಾಚಾರಗಳ ಬಗ್ಗೆ ಮಾತನಾಡಿದ್ದಕ್ಕೆ ನನ್ನನ್ನು ಟಾರ್ಗೆಟ್ ಮಾಡಿದೆ. ನನ್ನನ್ನು ಸೋಲಿಸಲು ಬಿಜೆಪಿ ಟಾರ್ಗೆಟ್ ಮಾಡಿದ್ದಾರೆ. ಬಿಜೆಪಿಯವರ ಆದಾಯಕ್ಕೆ ಸಮಸ್ಯೆಯಾಗಿದ್ದರಿಂದ ನನ್ನನ್ನ ಟಾರ್ಗೆಟ್ ಮಾಡಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು. : - – –- -