ಮುರುಘಾ ಶ್ರೀಗಳ ಬಂಧನ ವಿಚಾರ: ತನಿಖೆಯಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಲ್ಲ-ಗೃಹ ಸಚಿವ ಅರಗ ಜ್ಞಾನೇಂದ್ರ. ಶಿವಮೊಗ್ಗ,ಸೆಪ್ಟಂಬರ್,3,2022(..):ಪೋಕ್ಸೋ ಕಾಯ್ದೆಯಡಿ ಚಿತ್ರದುರ್ಗದ ಮುರುಘಾ ಶ್ರೀಗಳ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ತನಿಖೆಯಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ಈ ಕುರಿತು ಮಾತನಾಡಿರುವ ಗೃಹ ಸಚಿವ ಅರಗ ಜ್ಞಾನೇಂದ್ರ, ಪ್ರಕರಣ ತನಿಖಾ ಹಂತದಲ್ಲಿರುವುದುರಿಂದ ಹೆಚ್ಚು ಮಾತನಾಡುವುದಿಲ್ಲ. ತನಿಖೆಯಲ್ಲಿ ಸರ್ಕಾರ ಮಧ್ಯಪ್ರವೇಶಿಸಲ್ಲ. ಚಿತ್ರದುರ್ಗ ಮುರುಘಾ ಮಠಕ್ಕೆ ಸೂಕ್ತ ಭದ್ರತೆ ನಿಯೋಜನೆ ಮಾಡಲಾಗಿದೆ. ಮಠದ ಬಳಿ 7 ಕೆಎಸ್ ಆರ್ ಪಿ ತುಕಡಿ ನಿಯೋಜನೆ ಮಾಡಲಾಗಿದೆ ಎಂದರು. : - - - - - .