ಮುರುಘಶ್ರೀಗಳ ಬಂಧನ ವಿಚಾರ: ತನಿಖೆ ನಡೆಸಲು ಪೊಲೀಸರಿಗೆ ಮುಕ್ತ ಅವಕಾಶ-ಸಿಎಂ ಬಸವರಾಜ ಬೊಮ್ಮಾಯಿ. ಮಂಗಳೂರು,ಸೆಪ್ಟಂಬರ್,2,2022(..):ಪೋಕ್ಸೋ ಕಾಯ್ದೆಯಡಿ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶ್ರೀಗಳ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಪೊಲೀಸರಿಗೆ ಮುಕ್ತ ಅವಕಾಶ ನೀಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಮಂಗಳೂರು ಏರ್ ಪೋರ್ಟ್ ನಲ್ಲಿ ಈ ಕುರಿತು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಪ್ರಕರಣದ ಬಗ್ಗೆ ನಾವು ಮಾತನಾಡುವುದಿಲ್ಲ. ಪ್ರಕರಣ ತನಿಖೆ ನಡೆಸಲು ಪೊಲೀಸರಿಗೆ ಮುಕ್ತ ಅವಕಾಶ ನೀಡಿದ್ದೇವೆ. ಎಲ್ಲವೂ ಕಾನೂನು ಪ್ರಕಾರ ನಡೆಯಲಿದೆ. ಈ ಸಂದರ್ಭದಲ್ಲಿ ಮಾತನಾಡುವುದು ಸರಿಯಲ್ಲ ಎಂದರು. ಅಪ್ರಾಪ್ತ ವಯಸ್ಸಿನ ಇಬ್ಬರು ವಿದ್ಯಾರ್ಥಿನೀಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದಡಿ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿ ಅವರನ್ನು ಪೋಕ್ಸೋ ಕಾಯ್ದೆಯಡಿ ಚಿತ್ರದುರ್ಗ ಪೊಲೀಸರು ಗುರುವಾರ ರಾತ್ರಿ ಬಂಧಿಸಿದ್ದಾರೆ. ಎಫ್​ಐಆರ್ ದಾಖಲಾದ 6 ದಿನಗಳ ಬಳಿಕ ಮುರುಘಾ ಶ್ರೀಗಳ ಬಂಧನವಾಗಿದೆ. : - - - .