ಮಳೆಗೆ ಮನೆಗೋಡೆ ಕುಸಿದು ವೃದ್ಧೆ ಸ್ಥಳದಲ್ಲೇ ಸಾವು. ಮಂಡ್ಯ,ಸೆಪ್ಟಂಬರ್,1,2022(..):ಭಾರಿ ಮಳೆಯಿಂದಾಗಿ ಮನೆಯ ಗೋಡೆ ಕುಸಿದು ವೃದ‍್ಧೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯದ ವಿವೇಕಾನಂದ ನಗರದಲ್ಲಿ ಈ ಘಟನೆ ನಡೆದಿದೆ. ಪಾರ್ವತಿಬಾಯಿ ಮೃತಪಟ್ಟ ವೃದ್ಧೆ. ಕಳೆದ ಮೂರು ದಿನಗಳಿಂದ ಸುರಿದ ಮಳೆಗೆ ಮನೆ ಶೀಥೀಲಗೊಂಡಿತ್ತು. ಈ ನಡುವೆ ನಿನ್ನೆ ರಾತ್ರಿ ಏಕಾ ಏಕಿ ಮನೆ ಗೋಡೆ ಕುಸಿದು ಈ ದುರಂತ ಸಂಭವಿಸಿದೆ. ಮಂಡ್ಯ ಪೂರ್ವ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. : - - – – –-