ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆ. ಬೆಂಗಳೂರು,ಆಗಸ್ಟ್,30,2022(..):ಇಂದು ನಾಡಿನಾದ್ಯಂತ ಗೌರಿಗಣೇಶ ಹಬ್ಬದ ಸಂಭ್ರಮವಾಗಿದ್ದು ಈ ನಡುವೆ ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆಯಾಗಿದೆ. ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಪ್ರಶ್ನಿಸಿ ಅಂಜುಮಾನ್ ಸಂಸ್ಥೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಿದ್ದು ಇಂದು ವಿಚಾರಣೆಗೆ ಬರುವ ಸಾಧ್ಯತೆ ಇದೆ. ಈ ಮಧ್ಯೆ ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ಸಂಬಂಧ ಹೈಕೋರ್ಟ್ ಸರ್ಕಾರದ ನಿರ್ಧಾರಕ್ಕೆ ಬಿಟ್ಟಿದೆ. ಇನ್ನೊಂದೆಡೆ ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಬೇಕು ಎಂದು ಹಿಂದೂ ಪರ ಸಂಘಟನೆಗಳು ಸರ್ಕಾರಕ್ಕೆ ಒತ್ತಾಯಿಸಿವೆ. : - – - - – - .