ಶಿಕ್ಷಣ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ ಮಾಡಿದ ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆಗೆ ನೊಟೀಸ್. ಬೆಂಗಳೂರು,ಆಗಸ್ಟ್,30,2022(..):ಶಿಕ್ಷಣ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ ಮಾಡಿದ ರುಪ್ಸಾ ಸಂಘಟನೆ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆಗೆ ನೊಟೀಸ್ ನೀಡಲಾಗಿದೆ. ಶಿಕ್ಷಣ ಇಲಾಖೆ ಆತಯುಕ್ತ ಡಾ ವಿಶಾಲ್ ನೋಟಿಸ್ ನೀಡಿದ್ದು, ಸೆಪ್ಟಂಬರ್ 1ರ ಮಧ್ಯಾಹ್ನ 3 ಗಂಟೆಯೊಳಗೆ ದಾಖಲೆ ನೀಡುವಂತೆ ರುಪ್ಸಾ ಸಂಘಟನೆ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆಗೆ ಸೂಚನೆ ನೀಡಿದ್ದಾರೆ. ಶಿಕ್ಷಣ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ ಮಾಡಿ ಸಿಕ್ಷಣ ಸಚಿವ ಬಿ.ಸಿ ನಾಗೇಶ್ ವಜಾಗೊಳಿಸುವಂತೆ ಪ್ರಧಾನಿ ನರೇಂದ್ರ ಮೋದಿಗೆ ಲೋಕೇಶ್ ತಾಳಿಕಟ್ಟೆ ಪತ್ರ ಬರೆದಿದ್ದರು. : – – - - – .