ಸುಪ್ರೀಂಕೋರ್ಟ್ 49ನೇ ಮುಖ್ಯನ್ಯಾಯಮೂರ್ತಿಯಾಗಿ ಯು.ಯು ಲಲಿತ್ ಪ್ರಮಾಣ ವಚನ ಸ್ವೀಕಾರ. ನವದೆಹಲಿ,ಆಗಸ್ಟ್,27,2022(..): ಸುಪ್ರೀಂ ಕೋರ್ಟ್ ನ 49ನೇ ​ ಮುಖ್ಯ ನ್ಯಾಯಮೂರ್ತಿಯಾಗಿ ಯು.ಯು ಲಲಿತ್ ಅವರು ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದರು. ಸುಪ್ರೀಂ ಕೋರ್ಟ್​ ಮುಖ್ಯ ನ್ಯಾಯಮೂರ್ತಿ ಎನ್​ವಿ ರಮಣ ನಿವೃತ್ತರಾಗಿರುವ ಹಿನ್ನೆಲೆಯಲ್ಲಿ ಇಂದು ಯುಯು ಲಲಿತ್ ಅವರು ಭಾರತದ 49ನೇ ಮುಖ್ಯ ನ್ಯಾಯಮೂರ್ತಿಯಾಗಿ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ಅವರಿಗೆ ಪ್ರಮಾಣವಚನ ಬೋಧಿಸಿದರು. : .. - – 49th- – .