ಈದ್ಗಾ ಮೈದಾನ ವಿವಾದ: ಯಥಾಸ್ಥಿತಿ ಕಾಪಾಡುವಂತೆ ಹೈಕೋರ್ಟ್ ಆದೇಶ. ಬೆಂಗಳೂರು,ಆಗಸ್ಟ್,25,2022(..):ಚಾಮರಾಜಪೇಟೆ ಈದ್ಗಾ ಮೈದಾನ ವಿವಾದಕ್ಕೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಪಾಡುವಂತೆ ರಾಜ್ಯ ಹೈಕೋರ್ಟ್ ಆದೇಶಿಸಿದೆ. ಈದ್ಗಾ ಮೈದಾನ ಮಾಲೀಕತ್ವ ವಿಚಾರಕ್ಕೆ ಸಂಬಂಧಿಸಿದಂತೆ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡರ ಈ ಆದೇಶ ಹೊರಡಿಸಿದ್ದಾರೆ. ಎಂದಿನಂತೆ ಈದ್ಗಾ ಮೈದಾನವನ್ನ ಆಟದ ಮೈದಾನವಾಗಿ ಮಾತ್ರ ಬಳಸುವುದು ರಂಜಾನ್ ಬಕ್ರೀದ್ ಹಬ್ಬದಲ್ಲಿ ಮಾತ್ರ ಪ್ರಾರ್ಥನೆಗೆ ಅವಕಾಶ ನೀಡಲಾಗಿದೆ. ವಿಚಾರಣೆ ಸೆಪ್ಟಂಬರ್ 23ಕ್ಕೆ ಮುಂದೂಡಿಕೆ ಮಾಡಲಾಗಿದೆ. ಈ ಮೂಲಕ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಮುಂದಾಗಿದ್ದ ಸಂಘಟನೆಗಳಿಗೆ ಹಿನ್ನಡೆಯಾದಂತಾಗಿದೆ. : –-