ರಾಮನಗರವನ್ನ ಬೆಂಗಳೂರು ದಕ್ಷಿಣ ಎಂದು ನಾಮಕರಣಕ್ಕೆ ಸಂಪುಟ ಸಭೆ ಅನುಮೋದನೆ ಬೆಂಗಳೂರು,ಜುಲೈ,26,2024 (..):ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಮರುನಾಮಕರಣ ಮಾಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್‌ ತಿಳಿಸಿದ್ದಾರೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಎಚ್.ಕೆ.ಪಾಟೀಲ್, ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದಿದ್ದಾರೆ. ಹಾಗೆಯೇ 2017 -18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ವಯೋಮಿತಿ ಸಡಿಲಿಸಿ ಅರ್ಜಿ ಸಲ್ಲಿಸುವುದಕ್ಕೆ ವಿಶೇಷ ಅವಕಾಶ ನೀಡಲು ತೀರ್ಮಾನ ಮಾಡಲಾಗಿದೆ ಎಂದರು. ರಾಮನಗರ ಜಿಲ್ಲೆ ಹೆಸರನ್ನ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ನಾಮಕರಣ ಮಾಡಲು ಡಿಸಿಎಂ ಡಿಕೆ ಶಿವಕುಮಾರ್ ಪ್ರಸ್ತಾಪಿಸಿದ್ದರು. : , , ,