ಎಸಿಬಿ ರದ್ಧುಗೊಳಿಸಿದ್ಧ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋದ ರಾಜ್ಯ ಸರ್ಕಾರ. ನವದೆಹಲಿ,ಆಗಸ್ಟ್,23,2022(..):ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ರದ್ಧುಗೊಳಿಸಿ ಕರ್ನಾಟಕ ಹೈಕೋರ್ಟ್ ಹೊರಡಿಸಿದ್ಧ ಆದೇಶವನ್ನ ಪ್ರಶ್ನಿಸಿ ರಾಜ್ಯ ಸರ್ಕಾರ ಇದೀಗ ಸುಪ್ರೀಂಕೋರ್ಟ್ ಮೊರೆ ಹೋಗಿದೆ. ಎಸಿಬಿ ರದ್ಧುಗೊಳಿಸಿ ಹೈಕೋರ್ಟ್ ಹೊರಡಿಸಿದ್ಧ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ರಾಜ್ಯ ಸರ್ಕಾರ ಮೇಲ್ಮನವಿ ಅರ್ಜಿಯನ್ನ ಸಲ್ಲಿಸಿದೆ. ಈ ಅರ್ಜಿಯನ್ನ ವಿಚಾರಣೆಗೆ ಪರಿಗಣಿಸುವುದಾಗಿ ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಎನ .ವಿ ರಮಣ ತಿಳಿಸಿದ್ದಾರೆ. ಆಗಸ್ಟ್ 11 ರಂದು ಎಸಿಬಿ ರದ್ಧುಗೊಳಿಸಿ ಲೋಕಾಯುಕ್ತಕ್ಕೆ ಅಧಿಕಾರ ನೀಡಿ ಹೈಕೋರ್ಟ್ ಆದೇಶ ಹೊರಡಿಸಿತ್ತು. : - – - – -