ಸಿಎಂ ಮಾಧ್ಯಮ ಕಾರ್ಯದರ್ಶಿ ಗುರುಲಿಂಗಸ್ವಾಮಿ ಇನ್ನಿಲ್ಲ. ಬೆಂಗಳೂರು,ಆಗಸ್ಟ್,22,2022(..):ಸಿಎಂ ಬಸವರಾಜ ಬೊಮ್ಮಾಯಿ‌ ಅವರ ಮಾಧ್ಯಮ ಸಂಯೋಜಕ ಗುರಲಿಂಗಸ್ವಾಮಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಗುರುಲಿಂಗ ಸ್ವಾಮಿ ಅವರು ಬೆಳಗ್ಗೆ ಜಿಮ್‌ ಗೆ ಹೊಗಿ ವರ್ಕೌಟ್ ಮಾಡುವಾಗ ಎದೆನೋವು ಕಾಣಿಸಿಕೊಂಡಿದೆ. ಈ ನಡುವೆ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮದ್ಯೆ ನಿಧನರಾಗಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ‌ ಗೃಹ ಸಚಿವರಾದಾಗಿಂದ ಗುರುಲಿಂಗ ಸ್ವಾಮಿ ಮಾಧ್ಯಮ ವರ್ಗ ನೋಡಿಕೊಳ್ಳುತ್ತಿದ್ದರು. ಸಿಎಂ ಮಾಧ್ಯಮ ಕಾರ್ಯದರ್ಶಿಯಾಗಿ ವರ್ಷದಿಂದ ಹಿರಿಯ ಪತ್ರಕರ್ತ ಗುರುಲಿಂಗಸ್ವಾಮಿ ಸೇವೆ ಸಲ್ಲಿಸುತ್ತಿದ್ರು. ಹಲವು ಪತ್ರಿಕೆಗಳಲ್ಲಿ ಮತ್ತು ಸುದ್ದಿವಾಹಿನಿಗಳಲ್ಲಿ ಸೇವೆ ಸಲ್ಲಿಸಿದ್ದರು. ಬೆಂಗಳೂರು ಮತ್ತು ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ಹಿರಿಯ ವರದಿಗಾರರಾಗಿ ಸೇವೆ ಮಾಡಿದ್ದರು. : ’ - - – … ’ , 22, 2022 (..): ’ . . . . . .: / / ’