ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ: ಇಬ್ಬರು ಸಾವು. ಬೆಂಗಳೂರು,ಆಗಸ್ಟ್, 22,2022(..):ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸಾವನ್ನಪ್ಪಿರುವ ಘಟನೆ ಹೊಸಕೋಟೆ ತಾಲ್ಲೂಕಿನಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಅಟ್ಟೂರು ಬಳಿ ನಡೆದಿದೆ. ಬೆಂಗಳೂರಿನ ಶಾಜಿಯಾ ಭಾನು(26) ಇಬ್ರಾಹಿಂ ಸಾಬ್(16) ಮೃತಪಟ್ಟವರು. ಘಟನೆಯಲ್ಲಿ ಮೂವರು ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಡಾಬಾ ಬಳಿ ಲಾರಿ ಚಾಲಕ ಏಕಾಏಕಿ ಬ್ರೇಕ್ ಹಾಕಿದ್ದಕ್ಕೆ ಕಾರು ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ. ಮುರುಗಮಲ್ಲ ದರ್ಗಾಗೆ ಹೋಗಿ, ಚಿಂತಾಮಣಿಯಿಂದ ಬೈಲನರಸಾಪುರಕ್ಕೆ ಬಂದು ಟೀ ಕುಡಿದು ನಂತರ ಕೋಲಾರ ಹೆದ್ದಾರಿ ಮೂಲಕ ಕಾರು ವಾಪಸಾಗುತ್ತಿದ್ದಾಗ ಅಪಘಾತ ನಡೆದಿದೆ. ಈ ಕುರಿತು ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : - - – - -