ಕಾಲೇಜು ಬಸ್ ಮತ್ತು ಲಾರಿ ನಡುವೆ ಡಿಕ್ಕಿ: ಇಬ್ಬರು ಸಾವು: 10ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ. ಬೆಳಗಾವಿ,ಆಗಸ್ಟ್,20,2022(..):ಕಾಲೇಜು ಬಸ್ ಮತ್ತು ಲಾರಿ ನಡುವೆ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆ ಅಥಣಿಯಲ್ಲಿ ನಡೆದಿದೆ. ಕಾಲೇಜು ಬಸ್ ಚಾಲಕ ಮತ್ತು ಲಾರಿ ಚಾಲಕ ಘಟನೆಯಲ್ಲಿ ಸಾವನ್ನಪ್ಪಿದ್ದು 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಗಾಯಾಳು ವಿದ್ಯಾರ್ಥಿಗಳನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ಅಥಣಿ ಪೊಲೀಸರು ವಿದ್ಯಾರ್ಥಿಗಳಿಗೆ ಚಿಕಿತ್ಸೆ ಕೊಡಿಸಲು ನೆರವಾದರು. ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : - - –--