ರಾಜ್ಯದ 7 ಜಿಲ್ಲೆಗಳಲ್ಲಿ ಭಾರಿ ಮಳೆ: ಅರೆಂಜ್ ಅಲರ್ಟ್ ಘೋಷಣೆ ಬೆಂಗಳೂರು,ಜುಲೈ, 26,2024 (..):ರಾಜ್ಯದ ಕರಾವಳಿ ಸೇರಿದಂತೆ 7 ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಇನ್ನು ಯಾದಗಿರಿ, ವಿಜಯಪುರ, ಕಲಬುರಗಿ, ಬೀದರ್ ​ಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಮಳೆಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ. : , 7 ,