ರಾಜ್ಯದಲ್ಲಿ 140ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ:ಬೇರೆ ಪಕ್ಷ ಅಧಿಕಾರಕ್ಕೆ ಬರಲು ಬಿಡುವುದಿಲ್ಲ – ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ. ಬೆಂಗಳೂರು,ಆಗಸ್ಟ್,17,2022(..):ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿಯಲ್ಲಿ ಸ್ಥಾನ ನೀಡಿದ ಬಿಜೆಪಿ ಹೈಕಮಾಂಡ್ ಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಧನ್ಯವಾದ ಅರ್ಪಿಸಿದ್ದಾರೆ. ಈ ಸಂಬಂಧ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಬಿಎಸ್ ಯಡಿಯೂರಪ್ಪ, ಯಾವುದೇ ಸ್ಥಾನಮಾನಗಳನ್ನ ನಾನು ಆಪೇಕ್ಷೆ ಪಟ್ಟಿರಲಿಲ್ಲ. ಕೇಂದ್ರ ಕೊಟ್ಟ ಜವಾಬ್ದಾರಿಯನ್ನ ನಿರ್ವಹಿಸುತ್ತೇನೆ. ಬಿಜೆಪಿ ಅಧಿಕಾರಕ್ಕೆ ತರಲು ಪ್ರಯತ್ನ ಮಾಡುತ್ತೇನೆ. ದಕ್ಷಿಣ ಭಾರತದ ರಾಜ್ಯಗಳ ಬಗ್ಗೆಯೂ ಗಮನ ಹರಿಸಲು ಸೂಚನೆ. ನೀಡಲಾಗಿದೆ. ಜವಾಬ್ದಾರಿಯನ್ನ ವಿನಮ್ರತೆಯಿಂದ ಸ್ವೀಕರಿಸಿ ರಾಜ್ಯದಲ್ಲಿ ಓಡಾಡುವೆ.ಇನ್ನೂ10 ವರ್ಷಗಳ ಕಾಲ ಪಕ್ಷ ಸಂಘಟಿಸುತ್ತೇನೆ. ಎಲ್ಲಾ ಮುಖಂಡರು ಒಟ್ಟಾಗಿ ರಾಜ್ಯ ಪ್ರವಾಸ ಮಾಡುತ್ತೇವೆ. ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಬೇರೆ ಪಕ್ಷ ಅಧಿಕಾರಕ್ಕೆ ಬರಲು ಬಿಡುವುದಿಲ್ಲ. ಎಲ್ಲರೂ ಸೇರಿ 140ಕ್ಕೂ ಹೆಚ್ಚು ಸ್ಥಾನ ಗೆಲ್ಲಲು ಕೆಲಸ ಮಾಡಿತ್ತೇವೆ. ನನಗೆ ಜವಾಬ್ದಾರಿ ನೀಡಿದ ಬಿಜೆಪಿ ಹೈಕಮಾಂಡ್ ಗೆ ಧನ್ಯವಾದಗಳು ಎಂದು ಬಿಎಸ್ ವೈ ತಿಳಿಸಿದರು. : - – - - .