ಭದ್ರಾವತಿಯಲ್ಲಿ ಹಿಂದೂ ಕಾರ್ಯಕರ್ತನ ಮೇಲೆ ಚಾಕುವಿನಿಂದ ಇರಿದು ಹಲ್ಲೆಗೆ ಯತ್ನ. ಶಿವಮೊಗ್ಗ,ಆಗಸ್ಟ್,16,2022(..):ನಿನ್ನೆ ಶಿವಮೊಗ್ಗದಲ್ಲಿ ಪ್ರೇಮ್ ಸಿಂಗ್ ಎಂಬ ಯುವಕನ ಮೇಲೆ ಚಾಕು ಇರದು ತಲೆಮರಿಸಿಕೊಂಡಿದ್ಧ ಆರೋಪಿಗಳನ್ನ ಹೆಡೆಮುರಿ ಕಟ್ಟಲಾಗಿದೆ. ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದ್ದು ಇದೀಗ ಮತ್ತೊಂದು ಚಾಕು ಇರಿತ ಘಟನೆ ನಡೆದಿದೆ. ಹೌದು ಭದ್ರಾವತಿಯ ನೆಹರು ಬಡಾವಣೆಯಲ್ಲಿ ಹಿಂದೂ ಕಾರ್ಯಕರ್ತ ಸುನೀಲ್ (27) ಎಂಬ ಯುವಕನ ಮೇಲೆ ಚಾಕುವಿನಿಂದ ಇರಿದು ಹಲ್ಲೆಗೆ ಯತ್ನಿಸಲಾಗಿದೆ. ಡಿಚ್ಚಿ ಅಲಿಯಾಸ್ ಮುಬಾರಕ್ ಸೇರಿ ನಾಲ್ವರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಪ್ರೇಮ್​ಸಿಂಗ್​ ಮೇಲೆ ಚಾಕು ಇರಿತ ನಡೆದ ಪ್ರಕರಣ ಸಂಬಂಧ ಶಿವಮೊಗ್ಗದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಶಿವಮೊಗ್ಗಕ್ಕೆ ಆರ್​ಎಪಿ ತುಕಡಿ ಆಗಮಿಸಿದ್ದು, ಎಡಿಜಿಪಿ ಅಲೋಕ್​ ಕುಮಾರ್​ ನೇತೃತ್ವದಲ್ಲಿ ಬಂದೋಬಸ್ತ್​ ಮಾಡಲಾಗಿದೆ. ಪರಿಸ್ಥಿತಿಯನ್ನ ನಿಯಂತ್ರಣಕ್ಕೆ ತರುವ ಕೆಲಸ ಆಗ್ತಿದೆ. ಇದರ ನಡುವೆ ಭದ್ರಾವತಿಯಲ್ಲಿ ಸುನೀಲ್ ಎಂಬ ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆ ನಡೆದಿದೆ. ಗಾಯಗೊಂಡಿರುವ ಸುನೀಲ್ ​ನನ್ನು ಭದ್ರಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಳೇ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. : – - – – .