ಮುಂದಿನ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಶತಸಿದ್ಧ- ಮಾಜಿ ಸಿಎಂ ಸಿದ್ಧರಾಮಯ್ಯ ವಿಶ್ವಾಸ. ಬೆಂಗಳೂರು,ಆಗಸ್ಟ್,15,2022(..):ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋತು ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಶತಸಿದ್ಧ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಬೆಂಗಳೂರಲ್ಲಿ ಕಾಂಗ್ರೆಸ್ ಆಯೋಜಿಸಿದ್ಧ ಸ್ವಾತಂತ್ರ ನಡಿಗೆ ಪಾದಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಈ ಜಾಥಾದ ಮೂಲಕ ಸಾಮರಸ್ಯ ಮತ್ತು ಸಹಬಾಳ್ವೆಯ ಸಂದೇಶವನ್ನು ತಮ್ಮ ಪಕ್ಷ ನೀಡಲು ಬಯಸುತ್ತದೆ ಎಂದರು. ದೇಶ ಒಗ್ಗಟ್ಟಾಗಿರಬೇಕು, ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿಯಬೇಕು. ರಾಜ್ಯದಲ್ಲಿ ಈಗಾಗಲೇ ಬದಲಾವಣೆಯ ಗಾಳಿ ಬೀಸುತ್ತಿದ್ದು, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಸಿದ್ಧರಾಮಯ್ಯ ಹೇಳಿದರು. : - – - - -