ಎಸಿಬಿ ರಚನೆ ಆದೇಶ ರದ್ಧುಗೊಳಿಸಿದ ಹೈಕೋರ್ಟ್ ತೀರ್ಪು ಸ್ವಾಗತಿಸಿದ ಮಾಜಿ ಸಿಎಂ ಸಿದ್ಧರಾಮಯ್ಯ. ಚಿಕ್ಕಬಳ್ಳಾಪುರ,ಆಗಸ್ಟ್,11,2022(..):ಎಸಿಬಿ ರಚನೆಯನ್ನ ರದ್ಧುಗೊಳಿಸಿ ಹೈಕೋರ್ಟ್ ನೀಡಿರುವ ತೀರ್ಪನ್ನ ಮಾಜಿ ಸಿಎಂ ಸಿದ್ಧರಾಮಯ್ಯ ಸ್ವಾಗತಿಸಿದ್ದಾರೆ. ಈ ಕುರಿತು ಚಿಕ್ಕಬಳ್ಳಾಪುರ ಜಿಲ್ಲೆಯ ವಿಧುರಾಶ್ವತ್ಥದಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ, ಹೈಕೋರ್ಟ್ ಆದೇಶ ಗೌರವಿಸುತ್ತೇವೆ. ಎಸಿಬಿ ಪ್ರಕರಣಗಳು ಲೋಕಾಯುಕ್ತಕ್ಕೆ ಹೋಗುತ್ತವೆ. ಬೇರೆ ರಾಜ್ಯಗಳಲ್ಲೂ ಎಸಿಬಿ ಇದೆ. ಹೈಕೋರ್ಟ್ ಆದೇಶ ನೋಡಿ ಬಳಿಕ ಮಾತನಾಡುತ್ತೇನೆ ಎಂದಿದ್ದಾರೆ. ಸಿದ್ಧರಾಮಯ್ಯ ಸಿಎಂ ಆಗಿದ್ದ ವೇಳೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ರಚನೆ ಮಾಡಿದ್ದರು. ಇದೀಗ ಹೈಕೋರ್ಟ್ ಎಸಿಬಿ ರಚನೆ ರದ್ದುಗೊಳಿಸಿ ಲೋಕಾಯುಕ್ತಕ್ಕೆ ಅಧಿಕಾರ ನೀಡಿದೆ. : -- – – – - - .