ಎರಡು ಗುಂಪುಗಳ ನಡುವೆ ಮಾರಾಮಾರಿ: ಇಬ್ಬರು ಸಾವು. ಕೊಪ್ಪಳ,ಆಗಸ್ಟ್,11,2022(..):ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಗಲಾಟೆಯಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ. ಕೊಪ್ಪಳ ಜಿಲ್ಲೆ ಕನಕಗಿರಿ ತಾಲ್ಲೂಕಿನ ಹುಲಿಹೈದರ ಗ್ರಾಮದಲ್ಲಿ ಈ ಘಟನೆ ನಡೆದಿದೆ. 60 ವರ್ಷದ ಯಂಕಪ್ಪ, 22 ವರ್ಷದ ಭಾಷಾಸಾಬ್ ಮೃತಪಟ್ಟವರು. ಘಟನೆಯಲ್ಲಿ ಧರ್ಮಣ್ಣಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ ಇಬ್ಬರು ಬಲಿಯಾಗಿದ್ದಾರೆ. ಕನಕಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : - - –- - -