ಕಬಿನಿ ಜಲಾಶಯದಿಂದ ಅಪಾರ ಪ್ರಮಾಣದ ನೀರು ಬಿಡುಗಡೆ: ಶ್ರೀಕಂಠೇಶ್ವರ ದೇಗುಲದ ಸ್ನಾನಘಟ್ಟ ಮುಳುಗಡೆ. ಮೈಸೂರು,ಆಗಸ್ಟ್,9,2022(..):ರಾಜ್ಯದಲ್ಲಿ ಉತ್ತಮ ಮಳೆಯಾಗಿದ್ದು ಜಲಾಶಯಗಳಿಗೆ ನೀರು ಹರಿದು ಬರುತ್ತಿದೆ. ಈ ಮಧ್ಯೆ ಕಬಿನಿ ಜಲಾಶಯದಿಂದ ನದಿಗೆ ಅಪಾರಪ್ರಮಾಣದ ನೀರು ಬಿಡುಗಡೆ ಮಾಡಲಾಗಿದೆ. ಕಪಿಲಾ ನದಿಗೆ ನೀರು ಹರಿದು ಬರುತ್ತಿದ್ದು ಪ್ರವಾಹ ಪರಿಸ್ಥಿತಿ ಎದುರಾಗಿದೆ. ನೀರು ಬಿಡುಗಡೆ ಮಾಡಿದ ಹಿನ್ನೆಲೆ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದ ಸ್ನಾನಘಟ್ಟ ಮುಳುಗಡೆಯಾಗಿದೆ. ನದಿ ಮಧ್ಯದಲ್ಲಿರುವ ಕಾಲು ಮಂಟಪವೂ ಮುಳುಗಡೆಯಾಗಿದ್ದು ಪರಶುರಾಮ ದೇಗುಲವನ್ನು ನದಿಯ ನೀರು ಆವರಿಸಿದೆ. ಪ್ರವಾಹ ಭೀತಿ ಹಿನ್ನೆಲೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ನದಿ ಪಾತ್ರದ ಜನರಿಗೆ ಸೂಚನೆ ನೀಡಲಾಗಿದೆ. : - –-