ಸಿದ್ಧರಾಮೋತ್ಸವ: ದುರ್ಗಾಂಬ ದೇಗುಲಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ಮಾಜಿ ಸಿಎಂ ಸಿದ್ಧರಾಮಯ್ಯ. ದಾವಣಗೆರೆ,ಆಗಸ್ಟ್,3,2022(..):ಇಂದು ಮಾಜಿ ಸಿಎಂ ಸಿದ್ಧರಾಮಯ್ಯ ಹುಟ್ಟುಹಬ್ಬ ಈ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ 75ನೇ ಜನ್ಮದಿನ ಅಮೃತಮಹೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ. ಕಾರ್ಯಕ್ರಮಕ್ಕೆ ಆಗಮಿಸುವ ಮೊದಲು ಮಾಜಿ ಸಿಎಂ ಸಿದ್ಧರಾಮಯ್ಯ ದಾವಣಗೆರೆಯಲ್ಲಿರುವ ದುರ್ಗಾಂಬ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ದೇವಿಯ ಆಶೀರ್ವಾದ ಪಡೆದರು. ಕೆಲವೇ ಕ್ಷಣಗಳಲ್ಲಿ ಸಮಾರಂಭ ಆರಂಭವಾಗಲಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸೇರಿ ಘಟಾನುಘಟಿ ನಾಯಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಿದ್ಧರಾಮೋತ್ಸವಕ್ಕೆ ಜನಸಾಗರ ಹರಿದು ಬಂದಿದ್ದು, ಶಾಮನೂರು ಪ್ಯಾಲೇಸ್ ಮೈದಾನದಲ್ಲಿ ಸಿದ್ದರಾಮಯ್ಯನವರ ಫೋಟೋಗಳನ್ನು ಹಿಡಿದುಕೊಂಡ ಅಭಿಮಾನಿಗಳು ಘೋಷಣೆಗಳನ್ನು ಕೂಗುತ್ತಾ ಸಂಭ್ರಮಿಸುತ್ತಿದ್ದಾರೆ. : :- - - -