ಪ್ರವೀಣ್ ಹತ್ಯೆ ಖಂಡನೆ: ಪಿಎಫ್ ಐ, ಎಸ್ ಡಿಪಿಐ ನಿಷೇಧಕ್ಕೆ ಆಗ್ರಹಿಸಿ ರಾಣಿಬೆನ್ನೂರು ಟೌನ್ ಬಂದ್. ಹಾವೇರಿ,ಆಗಸ್ಟ್, 2,2022(..):ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಹಾವೇರಿ ಜಿಲ್ಲೆ ರಾಣಿಬೆನ್ನೂರಿನ ಟೌನ್ ಬಂದ್ ಗೆ ಹಿಂದೂ ಪರ ಸಂಘಟನೆಗಳು ಕರೆ ನೀಡಿದ್ದು ಈ ಹಿನ್ನೆಲೆಯಲ್ಲಿ ಬಹುತೇಕ ಅಂಗಡಿಮುಂಗಟ್ಟುಗಳು ಬಂದ್ ಆಗಿವೆ. ಪ್ರವೀಣ್ ಹತ್ಯೆ ಖಂಡಿಸಿ ಆರೋಪಿಗಳ ವಿರುದ್ಧ ಕಠಿಣಕ್ರಮಕ್ಕೆ ಆಗ್ರಹಿಸಿ ಬಂದ್ ಮಾಡಲಾಗಿದ್ದು, ಪಿಎಫ್ ಐ ಎಸ್ ಡಿಪಿಐ ಬ್ಯಾನ್ ಮಾಡುವಂತೆ ಹಿಂದೂ ಪರ ಸಂಘಟನೆಗಳು ಆಗ್ರಹಿಸಿದ್ದಾರೆ. ರಾಣಿ ಬೆನ್ನೂರಿನಲ್ಲಿ ಬಹುತೇಕ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದು, ಹಿಂದೂ ಪರ ಸಂಘಟನೆಗಳಿಂದ ರ್ಯಾಲಿ ನಡೆಸಲಾಗುತ್ತಿದೆ. ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ತಹಶೀಲ್ದಾರ್ ಗೆ ಹಿಂದೂಪರ ಸಂಘಟನೆ ಕಾರ್ಯಕರ್ತರು ಮನವಿ ಸಲ್ಲಿಸಲಿದ್ದಾರೆ. ರ್ಯಾಲಿಯಲ್ಲಿ ಶಾಸಕ ಅರುಣ್ ಕುಮಾರ್ ಕಾರ್ಯಕರ್ತರು ಭಾಗಿಯಾಗಿದ್ದಾರೆ. : – ’- - - – – ,