ಅಕ್ರಮ ಹಣ ವರ್ಗಾವಣೆ ಪ್ರಕರಣ: ದೆಹಲಿ ವಿಶೇಷ ನ್ಯಾಯಾಲಯಕ್ಕೆ ಡಿಕೆ ಶಿವಕುಮಾರ್ ಹಾಜರು. ನವದೆಹಲಿ,ಜುಲೈ,30,2022(..):ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ವಿಶೇಷ ನ್ಯಾಯಾಲಯಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಜರಾಗಿದ್ದಾರೆ. ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಗೆ ಡಿಕೆ ಶಿವಕುಮಾರ್ ಹಾಜರಾಗಿದ್ದಾರೆ. ಜುಲೈ 1ರಂದು ಡಿಕೆ ಶಿವಕುಮಾರ್ ವಿಚಾರಣೆಗೆ ಹಾಜರಾಗಿದ್ದರು. ಜಾಮೀನು ಅರ್ಜಿಗೆ ಅಕ್ಷೇಪಣೆ ಸಲ್ಲಿಸಲು ಇಡಿ ಸಮಯಾವಕಾಶ ಕೇಳಿದ್ದ ಹಿನ್ನೆಲೆ ಕೋರ್ಟ್ ವಿಚಾರಣೆಯನ್ನ ಜುಲೈ 30 ಇಂದಿಗೆ ಮುಂದೂಡಿತ್ತು. : –- - - – .