ಫೈಟಿಂಗ್ ಚಿತ್ರೀಕರಣದ ವೇಳೆ ಸಂಯುಕ್ತಾ ಹೆಗ್ಡೆಗೆ ಗಂಭೀರ ಗಾಯ ಬೆಂಗಳೂರು, ಜುಲೈ 28, 2022 (..):ನಟಿ ಸಂಯುಕ್ತಾ ಹೆಗ್ಡೆಗೆ ಸಿನಿಮಾ ಚಿತ್ರೀಕರಣದ ವೇಳೆ ಗಾಯಗೊಂಡಿದ್ದಾರೆ. ಸಂಯುಕ್ತಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಕ್ರೀಮ್’ ಚಿತ್ರೀಕರಣದ ವೇಳೆ ಅವರಿಗೆ ಭಾರಿ ಪೆಟ್ಟಾಗಿದೆ. ಫೈಟಿಂಗ್ ಸೀಕ್ವೆನ್ಸ್ ಚಿತ್ರೀಕರಿಸುವಾಗ ಈ ಅವಘಡ ನಡೆದಿದೆ. ಸಂಯುಕ್ತಾ ಕಾಲು ಟ್ವಿಸ್ಟ್ ಆಗಿದೆ. ಇದೀಗ ನಟಿಗೆ ಹೆಚ್ಚುವರಿ ಚಿಕಿತ್ಸೆ ನೀಡಲಾಗುತ್ತಿದೆ. ಡ್ಯೂಪ್ ಬಳಸಿ ಚಿತ್ರೀಕರಣ ಮಾಡೋಣ ಎಂದು ಚಿತ್ರತಂಡ ಒತ್ತಾಯಿಸಿದರೂ ಸಂಯುಕ್ತಾ ಒಪ್ಪದಿದ್ದ ಕಾರಣ ಚಿತ್ರೀಕರಣ ವೇಳೆ ನಟಿಗೆ ಪೆಟ್ಟಾಗಿದೆ ಎನ್ನಲಾಗಿದೆ. ಅಭಿಷೇಕ್ ಬಸಂತ್ ನಿರ್ದೇಶನದ ʻಕ್ರೀಮ್ʼ ಚಿತ್ರದಲ್ಲಿ ಸಂಯುಕ್ತಾ ಹೆಗ್ಡೆ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.