ಬಿಜೆಪಿ ಮುಖಂಡ ಪ್ರವೀಣ್ ಹತ್ಯೆ ಪ್ರಕರಣ: ಶೀಘ್ರವೇ ಆರೋಪಿಗಳ ಬಂಧನ- ಸಿಎಂ ಬಸವರಾಜ ಬೊಮ್ಮಾಯಿ. ಬೆಂಗಳೂರು,ಜುಲೈ,27,2022(..):ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಪೇಟೆಯಲ್ಲಿ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಎಂಬುವವರನ್ನ ದುಷ್ಕರ್ಮಿಗಳು ಹತ್ಯೆ ಮಾಡಿದ್ದು, ಈ ಬರ್ಬರ ಹತ್ಯೆಯನ್ನು ಖಂಡಿಸಿ ಪುತ್ತೂರು, ಸುಳ್ಯ, ಕಡಬ ತಾಲೂಕಿನಲ್ಲಿ ಸ್ವಯಂಪ್ರೇರಿತ ಬಂದ್‌ ಗೆ ವಿಎಚ್‌ಪಿ, ಭಜರಂಗದಳ, ಹಿಂದೂ ಜಾಗರಣ ವೇದಿಕೆ ಕರೆ ನೀಡಿದೆ. ಈ ಕುರಿತು ಮಾತನಾಡಿರುವ ಸಿಎಂ ಬಸವರಾಜ ಬೊಮ್ಮಾಯಿ, ಈ ಕುರಿತು ನಾನು ಗೃಹ ಸಚಿವರ ಜೊತೆಗೂ ಮಾತಾಡಿದ್ದೇನೆ. ಶೀಘ್ರವೇ ಆರೋಪಿಗಳನ್ನ ಬಂಧಿಸುತ್ತೇವೆ. ಸಂಪೂರ್ಣ ತನಿಖೆ ಮಾಡಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಇಂತಹ ಕೃತ್ಯ ಎಸಗುವವರನ್ನ ಮಟ್ಟ ಹಾಕುತ್ತೇವೆ ಎಂದು ಹೇಳಿದ್ದಾರೆ. : –- - - - .